Advertisement

Uppinangady; ಬಹುಮಹಡಿ ಕಟ್ಟಡಕ್ಕೆ ಬೆಂಕಿ

10:48 PM Jun 21, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

Advertisement

ಇಲ್ಲಿನ ಅಂಚೆ ಕಚೇರಿ ಸಮೀಪದ ಪೃಥ್ವೀ ಮಹಲ್‌ ಕಟ್ಟಡಕ್ಕೆ ಅಗ್ನಿ ಸ್ಪರ್ಶವಾಗಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ತಳಅಂತಸ್ತಿನಲ್ಲಿರುವ ಬೇಕರಿ, ಮೊಬೈಲ್‌ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಸಹಿತ ಹಲವು ಅಂಗಡಿಗಳು ಬೆಂಕಿ ಹಬ್ಬಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ.

ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next