ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಐರಾವತ ಬಸ್ಸಿನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಪ್ರಯಾಣಿಕರನ್ನು ರಕ್ಷಿಸಿ ಬೇರೊಂದು ಬಸ್ಸಿನಲ್ಲಿ ಕಳುಹಿಸಿಕೊಟ್ಟ ಘಟನೆ ಜು.18ರಂದು ಇಲ್ಲಿನ ಹಳೆಗೇಟು ಬಳಿ ನಡೆದಿದೆ.
ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು.
ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಬಸ್ಸಿನ ಹಿಂಬದಿಯಲ್ಲಿದ್ದ ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿ ಬೆಂಕಿ ಕಾಣಿಸಿ ಕೊಂಡಿತ್ತು.
ಹೊಗೆ ಬರುವುದನ್ನು ಕಂಡ ಚಾಲಕ ಕೂಡಲೇ ಬಸ್ಸನ್ನು ನಿಲ್ಲಿಸಿದರು.ಬಳಿಕ ಬಸ್ ಚಾಲಕ, ನಿರ್ವಾಹಕ ಹಾಗೂ ಸ್ಥಳೀಯರು ಸೇರಿ ರಸ್ತೆ ಬದಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಿದರು.