Advertisement

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

12:54 AM Sep 14, 2024 | Team Udayavani |

ಪುತ್ತೂರು: ಮುಂದಿನ ಸೆಪ್ಟಂಬರ್‌ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್‌ ರೈ ತಿಳಿಸಿದ್ದಾರೆ.

Advertisement

ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನೆ ಇಲಾಖೆಯ ಪ್ರಮುಖ ರನ್ನು ಭೇಟಿಯಾದ ಶಾಸಕರು ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣ ವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಿಸಿ ಮೂಲ ಸೌಕರ್ಯಗಳಿಗಗಿ ಸರಕಾರ ತತ್‌ಕ್ಷಣ ಅನುದಾನ ಬಿಡುಗಡೆ ಮಾಡಬೇಕು ಮತ್ತು ಒಂದು ವರ್ಷದೊಳಗೆ ಕಾಲೇಜು ಪ್ರಾರಂಭವಾಗಬೇಕು ಎಂದು ಶಾಸಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪಶುಸಂಗೋಪನ ಸಚಿವಾಲಯ, ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡಿದೆ.

ಹಸು, ಹಂದಿ, ಕುರಿ ಸಾಕಾಣಿಕೆಗೆ ಅವಕಾಶ
ಕೊಯಿಲದಲ್ಲಿರುವ ವಿಶಾಲವಾದ ಜಾಗದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಪೂರಕವಾಗಿ ಇರಬೇಕಾದ ಅಗತ್ಯ ಕ್ರಮಗಳನ್ನು ಮಾಡಿಕೊಳ್ಳುವುದರ ಜತೆಗೆ ಹೊರ ಗುತ್ತಿಗೆ ಆಧಾರದಲ್ಲಿ ಸ್ಥಳದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ ನೀಡುವಂತೆ ಶಾಸಕರು ಮನವಿ ಮಾಡಿದ್ದರು. ಇದಕ್ಕೆ ಇಲಾಖೆ ಸ್ಪಂದಿಸಿದ್ದು, ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶವನ್ನು ಕಲ್ಪಿಸಿದೆ.

“ಶಾಸಕನಾದ ಆರಂಭದಲ್ಲೇ ಕೊಯಿಲ ಜಾನುವಾರು ಕೇಂದ್ರದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಬೇಕು ಎಂದು ಕನಸು ಕಂಡಿದ್ದು, ಅದು ನನಸಾಗುವ ಕಾಲ ಬಂದಿದೆ. ಅಲ್ಲಿ ಅಗತ್ಯವಾಗಿ ಬೇಕಾದ ಎಲ್ಲ ಮೂಲ ಸೌಲಭ್ಯಗಳನ್ನು ಸರಕಾರ ಮಾಡಲಿದೆ ಮತ್ತು ಹಸು, ಹಂದಿ ಮತ್ತು ಕುರಿ ಸಾಕಾಣಿಕೆಗೂ ಅವಕಾಶ ಕಲ್ಪಿಸಿದೆ. ಮುಂದಿನ ಸೆಪ್ಟಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಲೇಜನ್ನು ಉದ್ಘಾಟಿಸಲಿದ್ದಾರೆ.” -ಅಶೋಕ್‌ ರೈ, ಶಾಸಕರು, ಪುತ್ತೂರು

Advertisement

Udayavani is now on Telegram. Click here to join our channel and stay updated with the latest news.

Next