Advertisement
ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಆದರೆ ಬೆಂಗಳೂರಿಗೆ ಎಂದು ಹೋದವ ಅಲ್ಲಿಗೆ ಏಕೆ ಹೋಗಿದ್ದಾನೆ ಅಥವಾ ಮೊಬೈಲ್ ಬೇರೆಯವರಲ್ಲಿ ಇದೆಯೇ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
Related Articles
Advertisement
ನಾಪತ್ತೆಯಾದ ವ್ಯಕ್ತಿಯನ್ನು ಸಂಪರ್ಕಿಸುವ ಹಲವು ಯತ್ನಗಳು ವಿಫಲಗೊಂಡ ಬಳಿಕ ಪೊಲೀಸರು ತಾಂತ್ರಿಕ ಸಲಹೆ ಪಡೆದಾಗ ಆತ ಬಳಸುತ್ತಿದ್ದ ಮೊಬೈಲ್ ಸಂಖ್ಯೆಯು ಪ್ರಸ್ತುತ ಹಿಮಾಚಲ ಪ್ರದೇಶದ ಟವರ್ ವ್ಯಾಪ್ತಿಯಲ್ಲಿ ಕಾರ್ಯಾ ಚರಿಸುತ್ತಿರುವುದು ಗೊತ್ತಾಗಿದೆ. ಆತ ತಲೆ ಮರೆಸಿಕೊಳ್ಳುವುದಕ್ಕಾಗಿಯೇ ಅಲ್ಲಿಗೆ ಹೋಗಿದ್ದಾನೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ವಿವರಗಳು ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಸಾಲಗಾರರ ಕಾಟ ತಪ್ಪಿಸಲು ನಾಟಕ! :
ಭಯೋತ್ಪಾದನ ಚಟುವಟಿಕೆಯಲ್ಲಿ ಬಂಧಿತನಾದರೆ ಆಯಾ ರಾಜ್ಯದ ಗೃಹ ಇಲಾಖೆ ಮೂಲಕ ಸ್ಥಳೀಯ ಪೊಲೀಸರಿಂದ ಪ್ರಾಥಮಿಕ ಮಾಹಿತಿ ಕಲೆ ಹಾಕಿ ವಿಚಾರಣೆ ನಡೆಸಲಾಗುತ್ತದೆ. ಆದರೆ ಈ ತನಕ ಅಂತಹ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಅಲ್ಲದೆ ನಾಪತ್ತೆಯಾದ ವ್ಯಕ್ತಿ ನೆಕ್ಕಿಲಾಡಿ ಪರಿಸರದಲ್ಲಿ ತಾನು ಪಡೆದ ಸಾಲವನ್ನು ಮರು ಪಾವತಿಸುವುದನ್ನು ತಪ್ಪಿಸುವ ಸಲುವಾಗಿ ತಾನು ತನಿಖಾ ತಂಡದ ವಶವಾಗಿರುವ ಸುದ್ದಿ ಹಬ್ಬಿಸಿರುವ ಶಂಕೆಯೂ ಇದೆ ಎನ್ನಲಾಗುತ್ತಿದೆ. ಈ ಎಲ್ಲ ಕೋನಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು ಹಿಮಾಚಲ ಪ್ರದೇಶದ ಪೊಲೀಸರನ್ನು ಸಂಪರ್ಕಿಸುವ ಕಾರ್ಯದಲ್ಲಿ ತೊಡಗಿರುವ ಮಾಹಿತಿ ಲಭ್ಯವಾಗಿದೆ.