Advertisement

Uppinangady ಮೊಬೈಲ್‌ ಕಸಿದ ತಾಯಿ: ಮಗಳು ನೇಣಿಗೆ ಶರಣು!

11:22 PM Aug 19, 2024 | Team Udayavani |

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್‌ ಕುಮಾರ್‌ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ.

Advertisement

ಜಾರ್ಖಂಡ್ ನ‌ ಸರ್ಜು ಬುಯ್ಯಾನ್‌ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್‌ ಕುಮಾರಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು ತಾಯಿ ಆಕ್ಷೇಪಿಸಿ ಮೊಬೈಲ್‌ ಕಿತ್ತುಕೊಂಡಿದ್ದರೆನ್ನಲಾಗಿದೆ. ಕೋಪಿಸಿಕೊಂಡ ಬಾಲಕಿಯು ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next