Advertisement

ಉಪ್ಪಿನಂಗಡಿ: ಬೈಕ್‌ಗೆ ಬಸ್‌ ಢಿಕ್ಕಿ: ಬೈಕ್‌ ಸವಾರ ಗಂಭೀರ

08:45 PM Nov 02, 2022 | Team Udayavani |

ಉಪ್ಪಿನಂಗಡಿ: ಇಲ್ಲಿನ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಭರತ್‌ ಕುಮಾರ್‌ (19) ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Advertisement

ಪೆಟ್ರೋಲ್‌ ಪಂಪೊಂದರಲ್ಲಿ ಕಾರ್ಮಿಕನಾಗಿರುವ ಭರತ್‌ ಕುಮಾರ್‌ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್‌ ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದ್ದು, ಬೈಕ್‌ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next