Advertisement

ಉಪ್ಪಿನಂಗಡಿ: ಟ್ರ್ಯಾಕ್ಟರ್‌ಗೆ ಕಂಟೈನರ್‌ ಲಾರಿ ಢಿಕ್ಕಿ, ರಸ್ತೆ ಸಂಚಾರ ಅಸ್ತವ್ಯಸ್ಥ

01:18 AM Dec 14, 2022 | Team Udayavani |

ಉಪ್ಪಿನಂಗಡಿ : ಓವರ್‌ಟೇಕ್‌ ಮಾಡುವ ಭರದಲ್ಲಿ ಕಂಟೈನರ್‌ ಲಾರಿಯೊಂದು ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದ ಕಾರಣ ಟ್ರ್ಯಾಕ್ಟರ್‌ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಈ ಘಟನೆಯಿಂದ ಅದೃಷ್ಟವಶಾತ್‌ ಟ್ರ್ಯಾಕ್ಟರ್‌ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತು. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next