Advertisement

Uppinangady ಶಿರಾಡಿ: ಸರಣಿ ಅಪಘಾತ; ನಾಲ್ವರಿಗೆ ಗಂಭೀರ ಗಾಯ

12:27 AM Jun 24, 2024 | Team Udayavani |

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.

Advertisement

ಈ ಬಗ್ಗೆ ಪೊಲೀಸರಿಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ ಮನೋಹರ ದೂರು ನೀಡಿದ್ದಾರೆ.

ತನ್ನ ಮನೆಯವರೊಂದಿಗೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನಕ್ಕೆಂದು ಕಾರಿನಲ್ಲಿ ಪ್ರಯಾಣಿಸುದ್ದ ವೇಳೆ, ಲಾರಿಯೊಂದು ಎದುರಿನಲ್ಲಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು ನನ್ನ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾರಾಯಣ, ದಮಯಂತಿ, ಕೂಸಮ್ಮ ಅವರು ಗಂಭೀರವಾಗಿ ಗಾಯಗೊಂಡರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮಹೇಶ್‌ ಅವರಿಗೂ ಗಾಯವಾಗಿದೆ.

ಘಟನೆಗೆ ಟ್ಯಾಂಕರ್‌ ಲಾರಿ ಚಾಲಕ ದಿನೇಶ್‌ನ ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಅಪಾದಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next