Advertisement

Uppinangady: ಅನಾರೋಗ್ಯದಿಂದ ವಿದ್ಯಾರ್ಥಿ ಸಾವು

11:57 PM Aug 22, 2023 | Team Udayavani |

ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲು ತ್ತಿದ್ದ ಇಲ್ಲಿನ ಇಂಡಿಯನ್‌ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

Advertisement

ಪೆದಮಲೆಯ ಸಮದ್‌ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರ ಅಹ್ಮದ್‌ ಸಹದ್‌ (15) ಮೃತ ಬಾಲಕ. ಶಾಲೆಯಲ್ಲಿ ಈತ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಆತ ನಿಧನ ಹೊಂದಿದ್ದಾನೆ.

ಮೃತ ಬಾಲಕ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next