Advertisement

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

10:04 PM Apr 17, 2024 | Team Udayavani |

ಉಪ್ಪಿನಂಗಡಿ: ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಗು ಸಹಿತ ದಂಪತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ಎ.17ರಂದು ನಡೆದಿದೆ.

Advertisement

ದ್ವಿಚಕ್ರ ವಾಹನದಲ್ಲಿದ್ದ ಸರಳೀಕಟ್ಟೆಯ ಉರ್ಲಡ್ಕ ನಿವಾಸಿಗಳಾದ ಮುಹಮ್ಮದ್‌ ಶರೀಫ್, ಅವರ ಪತ್ನಿ ಆಯೀಷಾ ತಸ್ಲಿàಮಾ ಹಾಗೂ ಮಗು ಮುಹಮ್ಮದ್‌ ರಫೀ ಗಾಯಗೊಂಡವರು. ಮುಹಮ್ಮದ್‌ ಶರೀಫ್ ಅವರ ಕಾಲಿಗೆ ಹಾಗೂ ಆಯೀಷಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಗು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದೆ.

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 34 ನೆಕ್ಕಿಲಾಡಿಯ ಫ್ಲೈಓವರ್‌ ಬಳಿ ಈ ಅಪಘಾತ ಸಂಭವಿಸಿದ್ದು, ವಾಹನವೊಂದನ್ನು ಓವರ್‌ಟೇಕ್‌ ಮಾಡಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್‌ ಎದುರಿನಿಂದ ಬಂದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತ ನಡೆದ ಬಳಿಕ ಚಾಲಕ ಓಡಲು ಯತ್ನಿಸಿದಾಗ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next