Advertisement
ಅವರು ಮಾ. 2ರಂದು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಕೂಟೇಲು ಬಳಿಯಲ್ಲಿ ಎರಡು ದಿನಗಳ ಕಾಲ ನಡೆಯುವ ವಿಜಯ-ವಿಕ್ರಮ ಕಂಬಳವನ್ನು ಉದ್ಘಾಟಿಸಿ ಮಾತನಾಡಿದರು. ಕಂಬಳಕ್ಕೆ ಇದ್ದ ಎಲ್ಲ ಅಡೆತಡೆಗಳು ನಿವಾರಣೆ ಆಗಿವೆ. ಇದರ ಹಿಂದೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರ ಶ್ರಮ ಬಹಳಷ್ಟಿತ್ತು. ಇದರ ಹೋರಾಟದಲ್ಲಿ ಅವರು ಗೆಲುವು ಸಾಧಿಸಿದ್ದು, ಮುಂದುವರಿಸುವ ಜವಾಬ್ದಾರಿ ಎಲ್ಲರಿಗೂ ಇದೆ ಎಂದರು.
ಜಿ.ಪಂ. ಸದಸ್ಯೆ ಶಯನಾ ಜಯಾನಂದ ಮಾತನಾಡಿ, ಕಂಬಳ ಕ್ರೀಡೆ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಅದರಲ್ಲೂ ವಿದೇಶಿಗರು ಬಂದು ಇಲ್ಲಿ ನೋಡುತ್ತಿದ್ದಾರೆ. ಮುಂದೆ ಇದು ಅಂತಾರಾಷ್ಟ್ರೀಯ ಕ್ರೀಡೆಯಾಗಲಿ ಎಂದರು. ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಮಾತನಾಡಿ, ಇಲ್ಲಿ ನಡೆಯುವ ಕಂಬಳ ಕ್ರೀಡೆ ಸಲುವಾಗಿ ಇದರ ಸಮಿತಿ ಪದಾಧಿಕಾರಿಗಳು ಒಂದು ತಿಂಗಳಿನಿಂದ ತಯಾರಿ ನಡೆಸುತ್ತಿದ್ದಾರೆ. ಅದರ ಫಲವಾಗಿ ಇಂದು ಇಲ್ಲಿ ಉತ್ಸವದ ರೀತಿಯಲ್ಲಿ ನಡೆಯುತ್ತಿದ್ದು, ಮುಂದೆಯೂ ಒಳ್ಳೆಯ ರೀತಿಯಲ್ಲಿ ನಡೆಯುವಂತಾಗಲಿ ಎಂದರು.
Related Articles
Advertisement
ರಾಷ್ಟ್ರಧ್ವಜ ಹಸ್ತಾಂತರಿಸಿ ಕಂಬಳಕ್ಕೆ ಚಾಲನೆಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಯೋಧ ವಿಶ್ವನಾಥ ಶೆಣೈ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ಕಂಬಳ ಕೋಣಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಕಂಬಳ ಕರೆಯಲ್ಲಿ ಧಾರ್ಮಿಕ ವಿಧಿ-ವಿಧಾನದ ಮೂಲಕ ಕಂಬಳ ಕ್ರೀಡೆಗೆ ಚಾಲನೆ ನೀಡಲಾಯಿತು. ಅನಂತರ ಸಭಾ ವೇದಿಕೆ ಮುಂದೆ ಇರಿಸಲಾಗಿದ್ದ ಕೆಲ ದಿನಗಳ ಹಿಂದೆ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜರ್ಮನಿ ಮೂಲದ ಮಾರ್ಕೀಸ್ ದಂಪತಿ ಕಂಬಳ ವೀಕ್ಷಣೆ ಮಾಡುತ್ತಿರುವುದು ಕಂಡುಬಂತು.