Advertisement

ಉಪ್ಪುಂದ:  ಚಾಕಲೇಟ್‌ ಗಂಟಲಲ್ಲಿ ಸಿಲುಕಿ 2ನೇ ತರಗತಿ ವಿದ್ಯಾರ್ಥಿನಿ ಸಾವು

03:02 PM Jul 20, 2022 | Team Udayavani |

ಉಪ್ಪುಂದ: ಕವರ್‌ ಸಹಿತ ಚಾಕಲೇಟ್‌  ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ.

Advertisement

ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹೌರಾದಲ್ಲಿ ಕಂಟ್ರಿ ಲಿಕ್ಕರ್ ಕುಡಿದು 6 ಮಂದಿ ಸಾವು ; ಹಲವರು ಅಸ್ವಸ್ಥ

ಘಟನೆ ವಿವರ: ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತ  ಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್  ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next