Advertisement

ಉಪ್ಪುಂದ: ಕಾಲುಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲು

06:25 PM Aug 08, 2022 | Team Udayavani |

ಉಪ್ಪುಂದ: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7) ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.

ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು, ದಾಟುವಾಗ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ.

ಈ ಹಳ್ಳ ಬೊಳಂಬಳ್ಳಿ ನದಿಗೆ ಸೇರಿದ್ದು ನೀರಿನ ರಭಸಕ್ಕೆ ಜೋರಾಗಿದ್ದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು ಶೋಧ ಕಾರ್ಯ ಭರದಿಂದ ಸಾಗಿದೆ.

ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ, ಬೈಂದೂರು ಪಿಎಸ್ಐ ಪವನ್ ನಾಯಕ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಪ್ಪಣ್ಣ ಶೆಟ್ಟಿ ಮೊದಲಾದವರು ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next