Advertisement

ಚೆಕ್‌ ಬೌನ್ಸ್‌ ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸುಪ್ರೀಂನಿಂದ ಸಮಿತಿ

09:45 PM Mar 10, 2021 | Team Udayavani |

ನವದೆಹಲಿ: ದೇಶದಲ್ಲಿ ಚೆಕ್‌ ಬೌನ್ಸ್‌ ಪ್ರಕರಣಗಳ ಸಂಖ್ಯೆ ಏರಿದೆ. ಇದು ಸ್ವತಃ ಸರ್ವೋಚ್ಚ ನ್ಯಾಯಾಲಯಕ್ಕೂ ತಲೆಬಿಸಿ ಉಂಟು ಮಾಡಿದೆ. ಆದ್ದರಿಂದ ಇಂತಹ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಲು ಏನು ಮಾಡಬೇಕೆಂದು ತೀರ್ಮಾನಿಸಲು ಬಾಂಬೆ ಉಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

Advertisement

ಇದರ ವರದಿಯನ್ನಾಧರಿಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಇದೇ ವೇಳೆ ಸರ್ವೋಚ್ಚ ಪೀಠದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ ನೇತೃತ್ವದ ಐವರ ಪೀಠಕ್ಕೆ, ಮಾಹಿತಿ ನೀಡಿದ ಕೇಂದ್ರಸರ್ಕಾರ, ಚೆಕ್‌ ಬೌನ್ಸ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲೆಂದೇ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಸಿದ್ಧವಿದೆ ಎಂದು ಹೇಳಿದೆ.

ಕಳೆದವಾರ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದ ಸರ್ವೋಚ್ಚ ಪೀಠ, 35 ಲಕ್ಷ ಚೆಕ್‌ ಬೌನ್ಸ್‌ ಪ್ರಕರಣಗಳು ಬಾಕಿಯಿರುವುದು ಹಾಸ್ಯಾಸ್ಪದ ಎಂದಿತ್ತು.

ಇದನ್ನೂ ಓದಿ :ಮಾರ್ಚ್‌ 20 – 21ರಂದು ನಿಗದಿಯಾಗಿದ್ದ ಎಸ್‌ಡಿಎ ಪರೀಕ್ಷೆ ಮುಂದೂಡಿಕೆ

Advertisement

Udayavani is now on Telegram. Click here to join our channel and stay updated with the latest news.

Next