Advertisement

BJP ಅವಧಿಯಲ್ಲಿನ ಹಗರಣ ಬಯಲಾಗುವ ಭಯದಿಂದ ಗಲಾಟೆ: ಡಿ.ಕೆ.ಶಿವಕುಮಾರ್‌

11:48 PM Jul 19, 2024 | Team Udayavani |

ಬೆಂಗಳೂರು: ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

Advertisement

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಬಯಲಿಗೆ ಎಳೆದಿದ್ದಾರೆ. ಪರಶುರಾಮ ಥೀಮ್‌ ಪಾರ್ಕ್‌ ಹಗರಣ, ಗಂಗಾಕಲ್ಯಾಣ ಅಕ್ರಮ, ಬಿಟ್‌ ಕಾಯಿನ್‌ ಹಗರಣ, ಪಿಎಸ್‌ಐ ಹಗರಣ ಸೇರಿದಂತೆ ಅನೇಕ ಹಗರಣಗಳು ನಡೆದಿವೆ ಎಂದರು.

ಯಡಿಯೂರಪ್ಪ ಅವರ ಆಪ್ತ ಉಮೇಶ್‌ ಮನೆಯಲ್ಲಿ 750 ಕೋಟಿಗೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಅನೇಕ ಅಕ್ರಮಗಳ ದಾಖಲೆಗಳು ದೊರೆತಿವೆ. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಅದು ಸಹ ತನಿಖೆ ನಡೆಯುತ್ತಿದೆ. ಗುರು ರಾಘವೇಂದ್ರ ಬ್ಯಾಂಕ್‌ ಅಲ್ಲಿ ಸಾವಿರಾರು ಕೋಟಿ ರೂಪಾಯಿಗಳು ಹಗರಣವಾಗಿದ್ದರೂ ಸಿಬಿಐಗೆ ನೀಡಿಲ್ಲ. ಅದನ್ನು ಸಹ ತನಿಖೆಗೆ ನೀಡಲು ಚರ್ಚೆ ಮಾಡಲಾಗುವುದು.

ಬಿಜೆಪಿ ಆರೋಪ ಮಾಡಿದ ನಂತರ ನೀವು ತನಿಖೆ ಮಾಡಲು ಮುಂದಾಗಿದ್ದೀರಿ ಎಂದು ಕೇಳಿದಾಗ ಈ ರೀತಿ ಏನೂ ಆಗಿಲ್ಲ. ಯಾರನ್ನೂ ರಕ್ಷಿಸುವ ಉದ್ದೇಶ ನಮಗಿಲ್ಲ. ಎಲ್ಲವನ್ನು ಬಯಲಿಗೆ ಎಳೆದು ಸಾರ್ವಜನಿಕರ ಗಮನಕ್ಕೆ ತರುವ ಉದ್ದೇಶ ನಮ್ಮದು ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next