Advertisement

ಉತ್ತರ ಪ್ರದೇಶ : 4 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ

02:58 PM Jun 09, 2021 | Team Udayavani |

ಉತ್ತರ ಪ್ರದೇಶ : ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ದಕ್ಷತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ನಾಲ್ಕು ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಮಾಡಿದೆ. ಅಲ್ಲದೆ ಸ್ಮಾರ್ಟ್ ಫೋನ್ ಗಳ ಬಳಕೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯನ್ನು ನೀಡಲು ಸೂಚನೆ ನೀಡಲಾಗಿದೆ.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ  ಸಹಾಯ ಮಾಡುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ಪೋಷಣೆಗೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಅಲ್ಲದೆ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಪರಹಾರವನ್ನೂ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.  ಇಷ್ಟೇ ಅಲ್ಲದೆ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಣ ಮಾಡುವ ಉದ್ದೇಶದಿಂದಲೂ ಈ ಸ್ಮಾರ್ಟ್ ಫೋನ್ ಗಳು ಸಹಾಯಕಾರಿಯಾಗುತ್ತವೆ. ಈ ಕಾರಣದಿಂದ ಉತ್ತರ ಪ್ರದೇಶ ಸರ್ಕಾರವು ಸ್ಮಾರ್ಟ್ ಫೋನ್ ವಿತರಣೆ ಮಾಡಲು ಮುಂದಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next