Advertisement

ಮೇ 31ರಂದು ನಡೆಯಬೇಕಾಗಿದ್ದ ನಾಗರಿಕ ಸೇವೆಯ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: UPSC

08:21 AM May 05, 2020 | Nagendra Trasi |

ನವದೆಹಲಿ: ಐಎಎಸ್, ಐಎಫ್ ಎಸ್ ಹಾಗೂ ಐಪಿಎಸ್ ಸೇವೆಗಳಿಗೆ ಆಯ್ಕೆ ಮಾಡುವ ಪ್ರತಿಷ್ಠಿತ ನಾಗರಿಕ ಸೇವೆಯ 2020ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಸೋಮವಾರ ಮತ್ತೆ ಮುಂದೂಡಿದೆ.

Advertisement

ದೇಶದಲ್ಲಿ ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಮೂರನೇ ಹಂತದ ಲಾಕ್ ಡೌನ್ ಮೇ 4ರಿಂದ 17ರವರೆಗೆ ಮುಂದುವರಿಸಿರುವ ಹಿನ್ನೆಲೆಯಲ್ಲಿ ಯುಪಿಎಸ್ ಸಿ ಆಯೋಗ ವಿಶೇಷ ಸಭೆ ಕರೆದು ಚರ್ಚೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.

ಯುಪಿಎಸ್ ಸಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ಪ್ರಕಾರ, ದೇಶದಲ್ಲಿ ನಿರ್ಬಂಧ ಮುಂದುವರಿಸಿರುವ ನಿಟ್ಟಿನಲ್ಲಿ ಪ್ರಸಕ್ತ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದಾಗಲಿ ಮತ್ತು ಸಂದರ್ಶನ ನಡೆಸುವುದು ಸಾಧ್ಯವಿಲ್ಲ. ಹೀಗಾಗಿ ನಿಗದಿಯಂತೆ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ 31ಕ್ಕೆ ನಡೆಯಬೇಕಾಗಿತ್ತು. ಆದರೆ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಇಂಡಿಯನ್ ಫಾರೆಸ್ಟ್ ಸರ್ವೀಸ್ ಎಕ್ಸಾಮಿನೇಷನ್ ಗಾಗಿ ಸ್ಕ್ರೀನಿಂಗ್ ಪರೀಕ್ಷೆ ಕೂಡಾ ನಡೆಯಬೇಕಾಗಿದ್ದು, ಐಎಫ್ ಎಸ್ ಪರೀಕ್ಷೆಯನ್ನು ಕೂಡಾ ಮುಂದೂಡಲಾಗಿದೆ. ಮೇ 20ರಂದು ಮತ್ತೊಮ್ಮೆ ಪರಿಸ್ಥಿತಿಯನ್ನು ಅವಲೋಕಿಸಿ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಯುಪಿಎಸ್ ಸಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next