Advertisement

ಯುಪಿಎಸ್‌ಸಿ ಪರೀಕ್ಷೆ: ಪರಿಶಿಷ್ಟರಿಗೆ ಉಚಿತ ತರಬೇತಿ ಕೇಂದ್ರ; ಸಚಿವ ಎ.ನಾರಾಯಣ ಸ್ವಾಮಿ

01:45 AM Nov 27, 2021 | Team Udayavani |

ಸುಬ್ರಹ್ಮಣ್ಯ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಹಿಂದುಳಿದ ವರ್ಗದವರ ಸಂಖ್ಯೆ ಬಹಳ ಕಡಿಮೆಯಿದೆ. ಹೀಗಾಗಿ ದೇಶದ ಎಲ್ಲ ರಾಜಧಾನಿ ಹಾಗೂ ಪ್ರಮುಖ ಕೇಂದ್ರಗಳಲ್ಲಿ ವಿಶೇಷವಾಗಿ ದಲಿತರಿಗೆ ಯುಪಿಎಸ್‌ಸಿ ಪರೀಕ್ಷಾ ತಯಾರಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ತರಬೇತಿ ಕೇಂದ್ರದಲ್ಲಿ ಹಿಂದುಳಿದ ವರ್ಗದವರಿಗೆ ಎಲ್ಲ ವ್ಯವಸ್ಥೆಗಳನ್ನು ಉಚಿತವಾಗಿ ನೀಡಲಾಗುವುದಲ್ಲದೇ ಆಸಕ್ತರಿಗೂ ತರಬೇತಿ ನೀಡಲಾಗುವುದು ಎಂದರು.

ಎಸ್‌.ಟಿ. ಅಭಿವೃದ್ಧಿ ನಿಗಮದಲ್ಲಿ ಹಿಂದುಳಿದ ವರ್ಗದವರಿಗೆ ನೀಡುವ ಸಾಲದ ಬಡ್ಡಿಯನ್ನು ಕಡಿಮೆ ಮಾಡಲು ಚರ್ಚಿಸಲಾಗಿದ್ದು ಶೀಘ್ರವೇ ಈ ಯೋಜನೆ ಜಾರಿಗೊಳ್ಳಲಿದೆ. ಸಣ್ಣ ಕೈಗಾರಿಕೆ ಸ್ಥಾಪನೆ ಮಾಡಲು ಮತ್ತು ಸ್ವ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ಶೀಘ್ರ ಜಾರಿಯಾಗಲಿದೆ. ದಲಿತರಿಗೆ ಗಂಗಾ ಕಲ್ಯಾಣ ಯೋಜನೆಯನ್ನು ನೀಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಇದನ್ನೂ ಓದಿ:ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

40 ಶೇ. ಪರ್ಸೆಂಟ್‌
ಆರೋಪ ತನಿಖೆಯಾಗಲಿ
ರಾಜ್ಯದಲ್ಲಿ ಪರ್ಸಂಟೇಜ್‌ ಸರಕಾರ ನಡೆಯುತ್ತಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ವಿಪಕ್ಷ ನಾಯಕರು ರಾಷ್ಟ್ರಪತಿಗೆ ಮತ್ತು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ದೇಶದ ಸಂಪತ್ತಾದ ತೆರಿಗೆಯು ಪೋಲಾಗಬಾರದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

Advertisement

ಸಿಪಿಸಿಆರ್‌ಐ ಸ್ಥಳಾಂತರ ತಡೆಗೆ ಕ್ರಮ
ಬಿಳಿನೆಲೆ ಗ್ರಾಮದ ಕಿದುವಿನಲ್ಲಿರುವ ಸಿಪಿಸಿಆರ್‌ಐಯನ್ನು ಕರ್ನಾಟಕದಿಂದ ಆಂಧ್ರಕ್ಕೆ ಸ್ಥಳಾಂತರಿಸುವ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಹಾಗೂ ನಿಗಮದ ಅಧ್ಯಕ್ಷರಲ್ಲಿ ಚರ್ಚಿಸುತ್ತೇನೆ. ಅಲ್ಲದೆ ಇತರ ರಾಜ್ಯಕ್ಕೆ ಸ್ಥಳಾಂತರವಾಗುವುದನ್ನು ತಡೆಯಲು ಪ್ರಯತ್ನ ಮಾಡಲಾಗುವುದು ಎಂದರು.

ಬಿಜೆಪಿ ಜಯಭೇರಿ
ಈ ಬಾರಿಯ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ 17ರಿಂದ 18 ಸ್ಥಾನ ಗೆಲ್ಲುವ ವಿಶ್ವಾಸವಿದೆ. ದೇಶ ಅಭಿವೃದ್ಧಿ ಪರವಾದ ಆಡಳಿತ ಮತ್ತು ಬೊಮ್ಮಾಯಿಯವರು ರಾಜ್ಯದಲ್ಲಿ ನೀಡುತ್ತಿರುವ ಪ್ರಾಮಾಣಿಕ ಆಡಳಿತದಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ನಾರಾಯಣ ಸ್ವಾಮಿ ಹೇಳಿದರು.

ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ
ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆಗೈಯಲು ಕೇಂದ್ರ ಸಚಿವ ನಾರಾಯಣ ಸ್ವಾಮಿ ಅವರು ಇಲ್ಲಿಗೆ ಆಗಮಿಸಿದ್ದರು. ದೇಗುಲದ ಪುರೋಹಿತರು ಸರ್ಪಸಂಸ್ಕಾರದ ವಿದಿ ವಿಧಾನ ನೆರವೇರಿಸಿದರು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next