Advertisement

ವರದಕ್ಷಿಣೆ ಹಣ ನೀಡಿಲ್ಲವೆಂದು ಸಂಬಂಧಿಕರಿಂದ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ನೀಚ!

09:50 AM Apr 30, 2022 | Team Udayavani |

ಜೈಪುರ: ಪತ್ನಿಯು 1.5 ಲಕ್ಷ ರೂಪಾಯಿ ವರದಕ್ಷಿಣೆ ಕೊಡಲು ವಿಫಲರಾದ ಕಾರಣಕ್ಕೆ ಪತಿಯೇ ಆಕೆಯ ಮೇಲೆ ಸಂಬಂಧಿಕರಿಂದ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಅಲ್ಲದೆ ಸಾಮೂಹಿಕ ಅತ್ಯಾಚಾರದ ವೀಡಿಯೊವನ್ನು ಚಿತ್ರೀಕರಿಸಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.

Advertisement

ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಯೂಟ್ಯೂಬ್‌ ಗೆ ಅಪ್‌ಲೋಡ್ ಮಾಡುವ ಮೂಲಕ ವರದಕ್ಷಿಣೆ ಹಣವನ್ನು ಪಡೆಯುವುದಾಗಿ ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ. ಸಂತ್ರಸ್ತ ಮಹಿಳೆಯು ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

“ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಭಾಗಿಯಾಗಿರುವ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಯೂಟ್ಯೂಬ್‌ಗೆ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ” ಎಂದು ಭರತ್‌ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಹೇಳಿದ್ದಾರೆ.

ಇದನ್ನೂ ಓದಿ:200 ಉಗ್ರರನ್ನು ಎದುರಿಸಲಾಗದ ಹತ್ತು ಲಕ್ಷ ಸೇನಾ ಪಡೆಗಳು ಏನು ಮಾಡುತ್ತಿದೆ?: ಮೆಹಬೂಬಾ ಮುಫ್ತಿ

“ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ಅವರಿಗೆ ವರದಕ್ಷಿಣೆ ನೀಡದಿದ್ದಾಗ, ಅವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಮತ್ತು ಆ ಘಟನೆಯನ್ನು ಚಿತ್ರೀಕರಿಸಿದರು. ಆ ವೀಡಿಯೊಗಳನ್ನು ಯೂಟ್ಯೂಬ್‌ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬನು ಐದು ದಿನಗಳ ಹಿಂದೆ ನನ್ನನ್ನು ಕಮಾನ್‌ ಗೆ ಕರೆತಂದಿದ್ದ, ಅಲ್ಲಿ ನನ್ನ ಮೇಲೆ ಅತ್ಯಾಚಾರವೆಸಗಿದರು” ಎಂದು ಸಂತ್ರಸ್ಥೆ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಅವರಿಬ್ಬರು 2019 ರಲ್ಲಿ ಹರಿಯಾಣದಲ್ಲಿ ಮದುವೆಯಾಗಿದ್ದರು ಎಂದು ವರದಿಯಾಗಿದೆ. ಅಂದಿನಿಂದ, ಹೆಂಡತಿಯ ಅತ್ತೆಯಂದಿರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಆಕೆ ತನ್ನ ಪೋಷಕರ ಮನೆಗೆ ಮರಳಿದ್ದಳು. ಆದರೆ, ಪತಿ ಆಕೆಯನ್ನು ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.

ಮರಳಿದ ನಂತರ, ಪತಿ ತನ್ನ ಇಬ್ಬರು ಸಂಬಂಧಿಕರನ್ನು ಮನೆಗೆ ಕರೆದು, ಸಂತ್ರಸ್ತೆಯ ಮುಂದೆಯೇ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಸಂಬಂಧಿಕರಿಗೆ ಹೇಳಿ ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next