Advertisement

ಅಧಿಕ ಬೆಲೆಗೆ ಯೂರಿಯಾ ಮಾರಾಟ: ಕ್ರಮಕ್ಕೆ ಒತ್ತಾಯ

02:00 PM Aug 23, 2020 | Suhan S |

ಮಾನ್ವಿ: ರಸಗೊಬ್ಬರ ಅಂಗಡಿಗಳ ಮಾಲೀಕರು ದುಬಾರಿ ಬೆಲೆಗೆ ಯೂರಿಯಾ ಮಾರಾಟ ಮಾಡುತ್ತಿದ್ದು, ಕೃಷಿ ಅಧಿಕಾರಿಗಳು ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕಾಧ್ಯಕ್ಷ ಕೆ.ವೈ. ಬಸವರಾಜ ನಾಯಕ ಒತ್ತಾಯಿಸಿದರು.

Advertisement

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ರೈತರು ಹತ್ತಿ, ತೊಗರಿ, ಸಜ್ಜೆ, ಸೂರ್ಯಕಾಂತಿ ಬೆಳೆದಿದ್ದಾರೆ. ಈ ಬಾರಿ 20 ಸಾವಿರ ಹೆಕ್ಟೇರ್‌ನಲ್ಲಿ ಹತ್ತಿ ಬೆಳೆದಿದ್ದಾರೆ. ಆದರೆ ಪ್ರಸ್ತುತ ರೈತರಿಗೆ ಅವಶ್ಯಕವಿರುವ ಔಷ ಧ ಮತ್ತು ಯೂರಿಯಾ ಗೊಬ್ಬರ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುತ್ತಿಲ್ಲ. ಅನಿವಾರ್ಯವಾಗಿ ರೈತರು ಖಾಸಗಿ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಖರೀದಿಸುವಂತಾಗಿದೆ. ಕೂಡಲೇ ಕೃಷಿ ಅಧಿಕಾರಿಗಳು ಅಗತ್ಯ ಔಷಧ,  ಯೂರಿಯಾ ಗೊಬ್ಬರ ಪೂರೈಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎಪಿಎಂಸಿ, ಭೂ ಸುಧಾರಣೆ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಿರುವುದುರೈತ ವಿರೋಧಿಯಾಗಿದೆ. ರೈತರನ್ನು ದಿವಾಳಿ ಎಬ್ಬಿಸಿ ಬೀದಿಗೆ ತರುವ ಹುನ್ನಾರವಾಗಿದೆ. ರೈಲ್ವೆ ಖಾಸಗೀಕರಣ, ಎಪಿಎಂಸಿ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆಗಳನ್ನು ಕಾರ್ಪೋರೇಟ್‌ ಕಂಪನಿಗಳಿಗೆ ಆನುಕೂಲವಾಗುವಂತೆ ರೂಪಿಸಲಾಗಿದೆ. ಕೂಡಲೇ ಈ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಯೂರಿಯಾ ಗೊಬ್ಬರ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next