Advertisement

ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆಒತ್ತಾಯ

06:00 PM Oct 20, 2022 | Nagendra Trasi |

ಶಿವಮೊಗ್ಗ: ಅಡಕೆ ಬೆಳೆಗಾರರು ಎಲೆಚುಕ್ಕಿ, ಕೊಳೆರೋಗ ಮತ್ತು ಇತರೆ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಲಾಯಿತು.

Advertisement

ನಮ್ಮದು ದೇಶದಲ್ಲೇ ಅತಿ ಹೆಚ್ಚು ಅಡಕೆ ಬೆಳೆಯುವ ರಾಜ್ಯವಾಗಿದ್ದು, ಒಟ್ಟು ಪ್ರದೇಶದ ಶೇ.68 ರಷ್ಟು ಮತ್ತು ದೇಶದ ಒಟ್ಟು ಅಡಕೆ ಉತ್ಪಾದನೆಯ ಶೇ.80 ರಷ್ಟು ಕೊಡುಗೆ ನೀಡುತ್ತದೆ. ಪ್ರಸ್ತುತ ಕರ್ನಾಟಕದಲ್ಲಿ ಅಡಕೆಯನ್ನು 5.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, 5 ದಶಲಕ್ಷಕ್ಕೂ ಹೆಚ್ಚು ಜನರು ಅಡಕೆ ಕೃಷಿಯ ಮೇಲೆ ಅವಲಂಬಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 1.02 ಲಕ್ಷ ಹೆಕ್ಟೇರ್‌ ಪ್ರದೇಶವನ್ನು ಅಡಕೆ ಬೆಳೆಯಲು ಬಳಸಲಾಗುತ್ತಿದ್ದು, ಜಿಲ್ಲೆಯ ಆರ್ಥಿಕತೆಯ ಶೇ.60 ರಷ್ಟು ಅಡಕೆ ಉತ್ಪಾದನೆ ಇದ್ದು, ದೊಡ್ಡ ಪ್ರಮಾಣದ ತೆರಿಗೆ ಮತ್ತು ಸೆಸ್‌ ನೀಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಕೆ ಕೃಷಿಗೆ ಹೆಚ್ಚಿನ ಹಾನಿಯಾಗುತ್ತಿದೆ. ಜೈವಿಕ ಮತ್ತು ಅಜೈವಿಕ ಅಂಶಗಳು ರೈತರಿಗೆ ದೊಡ್ಡ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತಿವೆ. ಇದಲ್ಲದೆ, ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಗಳು ಎಲೆಚುಕ್ಕೆ, ಹಣ್ಣಿನಂತಹ ರೋಗ
ಗಳಿಗೆ ಅನುಕೂಲಕರವಾಗಿದ್ದು, ಕೊಳೆರೋಗ, ಗ್ಯಾನೊಡೆರಾಮಾ ಕೊಳೆ ರೋಗ ಇತ್ಯಾದಿಗಳು ಇಳುವರಿಯಲ್ಲಿ ಸಾಕಷ್ಟು ನಷ್ಟವನ್ನುಂಟು ಮಾಡಿದೆ.

ನಿರಂತರ ಮಳೆಯಿಂದಾಗಿ ಮಣ್ಣಿನಿಂದ ಪೋಷಕಾಂಶ ನಾಶವಾಗುತ್ತಿದ್ದು, ಈ ರೋಗದ ತೀವ್ರತೆ ಹೆಚ್ಚಾಗಿದೆ. ಹಾಗೂ ಗಾಳಿ ಮೂಲಕ ರೋಗ ಹರಡುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಅಡಕೆ ಉತ್ಪಾದನೆ ಮತ್ತು ಇಳುವರಿ ನಷ್ಟದಿಂದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತರು ತೀವ್ರ ಆರ್ಥಿಕ ನಷ್ಟ ಮತ್ತು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಎಲ್ಲ ಜಿಲ್ಲೆಗಳ ರೈತರು ಮತ್ತು ಅಡಕೆ ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿಯೂ ರೈತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ. ರೈತರು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಈ ಗಂಭೀರ
ಪರಿಸ್ಥಿತಿಯ ನಡುವೆ ಅಡಕೆ ಬೆಳವಣಿಗೆ ಮತ್ತು ಇಳುವರಿ ಮೇಲೆ ಪರಿಣಾಮ ಬೀರುವ ರೋಗಗಳಿಗೆ ಪರಿಹಾರ ಕಂಡುಹಿಡಿಯುವ, ಆತ್ಮವಿಶ್ವಾಸ ಮೂಡಿಸುವ ಕ್ರಮ ಆಗಬೇಕಾಗಿದೆ.

ಅಡಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಈಗಾಗಲೇ ರೋಗ ನಿರ್ವಹಣೆಗಾಗಿ ಸಸ್ಯ ಸಂರಕ್ಷಣಾ ರಾಸಾಯನಿಕಗಳನ್ನು ಒದಗಿಸುತ್ತಿದ್ದರೂ ರೈತರಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಇದು ಸಾಕಾಗುವುದಿಲ್ಲ. ಆದ್ದರಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮ ಅಳವಡಿಸಿಕೊಳ್ಳುವಲ್ಲಿ ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರದಂತೆ ಅಡಕೆ ಉತ್ಪಾದನೆ ನಷ್ಟಕ್ಕೆ ಸೂಕ್ತ ಪರಿಹಾರ ಅಲ್ಲದೇ,
ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಅಧ್ಯಯನ ಮಾಡಲು ಅಡಕೆ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಮತ್ತು ಈ ನಿಟ್ಟಿನಲ್ಲಿ
ಅಡಕೆ ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಸೂಕ್ತ ಕಾರ್ಯತಂತ್ರ ರೂಪಿಸಲು ವಿನಂತಿಸಲಾಗಿದೆ.

Advertisement

ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ಶಿಫಾರಸು ಮಾಡಲು ಕೇಂದ್ರ ತಂಡವನ್ನು ಕಳುಹಿಸಲು ಈ ಮೂಲಕ ವಿನಂತಿಸುತ್ತೇನೆ ಎಂದು ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಗೃಹಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next