Advertisement

ಮಹಾ ಸಚಿವರಿಗೆ ಬೆಳಗಾವಿಗೆ ಪ್ರವೇಶ ನೀಡದಂತೆ ಒತ್ತಾಯ

06:30 PM Dec 03, 2022 | Team Udayavani |

ಬೆಳಗಾವಿ: ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿ. 6ರಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಇವರಿಗೆ ಪ್ರವೇಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾ| ಶಿವರಾಜ ಪಾಟೀಲ ಅವರನ್ನು ಸರ್ಕಾರ ನೇಮಿಸಿದೆ. ಈ ಕಚೇರಿಯನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿದರೆ ಮಾತ್ರ ಆಯೋಗದ ಪ್ರಯೋಜನ ಗಡಿ ಭಾಗದ ಜನತೆಗೆ ಲಭಿಸುತ್ತದೆ. ಕಳೆದ ಒಂದೂವರೆ ವರ್ಷದ ಹಿಂದೆ ತಾವು ಅಧಿಕಾರಕ್ಕೆ ಬಂದ ಕೂಡಲೇ ಸುವರ್ಣ ವಿಧಾನಸೌಧವನ್ನು ಸಕ್ರಿಯಗೊಳಿಸುವುದಾಗಿ ಭರವಸೆ ನೀಡಿದ್ದೀರಿ.

ಆದರೆ ಇಲ್ಲಿಯವರೆಗೆ ಕೇವಲ ಮಾಹಿತಿ ಹಕ್ಕು ಆಯೋಗದ ಕಚೇರಿಯನ್ನು ಹೊರತುಪಡಿಸಿದರೆ ಇನ್ನುಳಿದ ಯಾವುದೇ ಕಚೇರಿಯನ್ನು ಸ್ಥಳಾಂತರ ಮಾಡಿಲ್ಲ. ಅಧಿವೇಶನ ಮುನ್ನಾದಿನ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಮಹಾರಾಷ್ಟ್ರದ ಕನ್ನಡ ಪ್ರದೇಶ ಜತ್‌ ಸೇರಿದಂತೆ ಇತರೆ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರಿಸಲು ಪ್ರಯತ್ನಿಸುವುದಾಗಿ ಹೇಳಿದ್ದು ಸ್ವಾಗತಾರ್ಹ. ಸಚಿವ ಸಂಪುಟದ ಇಬ್ಬರು ಹಿರಿಯ ಸಚಿವರನ್ನು ಹಾಗೂ ಹಿರಿಯ
ಅ ಧಿಕಾರಿಗಳನ್ನು ಜತ್‌ ಪ್ರದೇಶಕ್ಕೆ ಕಳುಹಿಸಿ ಅಲ್ಲಿನ ಕನ್ನಡಿಗರಿಗೆ ಧೈರ್ಯ ತುಂಬಬೇಕು.

50 ವರ್ಷಗಳಿಂದ ಗಡಿಭಾಗದಲ್ಲಿ ಸತತವಾಗಿ ನಾಡದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವ ಎಂಇಎಸ್‌ ಹಾಗೂ ಶಿವಸೇನೆಯನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮುಖಂಡರಾದ ಮಹಾದೇವ ತಳವಾರ, ಸುರೇಶ ಗವನ್ನವರ, ಗಣೇಶ ರೋಕಡೆ, ರಮೇಶ ಯರಗಣ್ಣವರ, ವಿನಾಯಕ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next