Advertisement

ಅನರ್ಹ ಶಾಸಕರ ಆಸೆಗೆ ಬ್ರೇಕ್! ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

09:56 AM Aug 27, 2019 | Nagendra Trasi |

ನವದೆಹಲಿ:ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ಅನರ್ಹ ಶಾಸಕರ ಆಸೆಗೆ ಬ್ರೇಕ್ ಬಿದ್ದಂತಾಗಿದ್ದು, ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

Advertisement

ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಸಾಲಿಸಿಟರ್ ಜನರಲ್ ಮುಕುಲ್ ರೋಹ್ಟಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಪೀಠ ನಿರಾಕರಿಸಿದೆ.

ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರು ಸಲ್ಲಿಸಿದ್ದ ರಾಜೀನಾಮೆಯನ್ನು ಅಂದು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಿದ್ದರು. ಅಲ್ಲದೇ ಅದರಲ್ಲಿ 13 ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಇದೀಗ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಬಂಡಾಯ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next