Advertisement

EDಯಿಂದ ಬಂಧನಕ್ಕೊಳಗಾದ ತಮಿಳುನಾಡು ಸಚಿವ ಬಾಲಾಜಿಗೆ ತುರ್ತು ಶಸ್ತ್ರ ಚಿಕಿತ್ಸೆಗೆ ಸೂಚನೆ

02:15 PM Jun 14, 2023 | Team Udayavani |

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಲಾಗಿದ್ದು, ವೈದ್ಯರು ಅವರ ಹೃದಯದಲ್ಲಿ ಮೂರು ಬ್ಲಾಕ್ ಗಳನ್ನು ಗಮನಿಸಿದ್ದಾರೆ.

Advertisement

ಬುಧವಾರ ಶೋಧ ನಡೆಸಿದ ನಂತರ ಅವರನ್ನು ಬಂಧಿಸಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಸುದೀರ್ಘ ವಿಚಾರಣೆಯ ನಂತರ ಸಚಿವರನ್ನು ಬಂಧಿಸಲಾಯಿತು.

ಸಚಿವರು ಇದ್ದ ಅವರ ನಿವಾಸದ ಮೇಲೆ ಇಡಿ ನಿಖರವಾಗಿ 24 ಗಂಟೆಗಳ ಹಿಂದೆ ತನ್ನ ದಾಳಿಯನ್ನು ಪ್ರಾರಂಭಿಸಿತು. ಮಧ್ಯರಾತ್ರಿ 1.30ರ ಸುಮಾರಿಗೆ ಸಚಿವರನ್ನು ತನಿಖಾ ಸಂಸ್ಥೆ ಬಂಧಿಸುವುದಾಗಿ ತಿಳಿಸಿದಾಗ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಡಿಎಂಕೆ ನಾಯಕನನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆಯೇ ಆಸ್ಪತ್ರೆಯ ಹೊರಗೆ ಹೈಡ್ರಾಮಾ ನಿರ್ಮಾಣವಾಗಿತ್ತು. ಇಡಿ ಕ್ರಮವನ್ನು ವಿರೋಧಿಸಿ ಅವರ ಬೆಂಬಲಿಗರು ಅಲ್ಲಿ ಜಮಾಯಿಸಿದಾಗ ಅವರು ಕಾರಿನಲ್ಲಿ ಮಲಗಿದ್ದಾಗ ನೋವಿನಿಂದ ಅಳುತ್ತಿರುವುದು ಕಂಡುಬಂದಿದೆ.

ಡಿಎಂಕೆ ನಾಯಕ ಆಂಬ್ಯುಲೆನ್ಸ್‌ನಲ್ಲಿ ಗೋಳಾಡುತ್ತಿರುವುದನ್ನು ನೋಡಿ ಅವರ ಬೆಂಬಲಿಗರು ಹೊರಗೆ ಇಡಿ ವಿರುದ್ಧ ಘೋಷಣೆಗಳನ್ನು ಕೂಗಿದರು. ವೈದ್ಯರು ಅವರ ಇಸಿಜಿಯಲ್ಲಿ ವ್ಯತ್ಯಾಸಗಳನ್ನು ಕಂಡಿದ್ದರಿಂದ ಅವರನ್ನು ತೀವ್ರ ನಿಗಾ ಘಟಕಕ್ಕೆ ಐಸಿಯು ಸ್ಥಳಾಂತರಿಸಲಾಗಿದೆ.

Advertisement

“ಸೆಂಥಿಲ್ ಬಾಲಾಜಿ ಅವರು ಆಂಜಿಯೋಗ್ರಾಮ್‌ಗೆ ಒಳಗಾಗಿದ್ದಾರೆ, ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಆದಷ್ಟು ಬೇಗ ಸೂಚಿಸಲಾಗುತ್ತದೆ” ಎಂದು ತಮಿಳುನಾಡು ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಚೆನ್ನೈ ತನ್ನ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next