Advertisement

ದೌರ್ಜನ್ಯ ಪ್ರಕರಣ; ತುರ್ತಾಗಿ ಪರಿಹಾರ ವಿತರಿಸಿ

08:15 PM Mar 04, 2021 | Team Udayavani |

ಬೀದರ: ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಕಾಯ್ದೆಯಡಿ ಎಫ್‌ಐಆರ್‌ ದಾಖಲಾದ ಕೂಡಲೇ ಸಂಬಂಧಿ ಸಿದ ಸಂತ್ರಸ್ತರಿಗೆ 15 ದಿನದೊಳಗೆ ಶೇ.25 ಪರಿಹಾರ ಧನ ಮತ್ತು ಚಾರ್ಜ್‌ಶೀಟ್‌ ಮಾಡಿದ ಕೂಡಲೇ ಶೇ.50 ಪರಿಹಾರ ಧನ ಕೊಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಹೇಳಿದರು.

Advertisement

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರಿತ್ಯ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2020ರ ಜ.1ರಿಂದ 2021ರ ಡಸೆಂಬರ್‌ ಮಾಹೆವರೆಗೆ ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ 50 ಸಂತ್ರಸ್ತರಿಗೆ 82.25 ಲಕ್ಷ ರೂ. ಪರಿಹಾರ ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಿಜಯಲಕೀÒ$¾ಸಭೆಗೆ ತಿಳಿಸಿದರು.

ವಿಪ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಘಟಿಸದಂತೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಈಗಿನ ಪ್ರಕರಣಗಳಿಗೆ ಸರ್ಕಾರದಿಂದ ಪರಿಹಾರ ಧನ ವಿತರಿಸುವಂತೆ ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಜಹೀರಾ ನಸಿಮ್‌, ಎಸ್‌ಪಿ ನಾಗೇಶ ಡಿ.ಎಲ್‌., ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಟೇಲ್‌, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರೋಜಾ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next