Advertisement

ಮೈಷುಗರ್‌ ಆರಂಭಿಸಲು ಆಗ್ರ‌ಹ

02:14 PM Oct 22, 2020 | Suhan S |

ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರತಿಭಟನೆ ನಡೆಯಿತು. ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿಸ್ವಾಮ್ಯದಲ್ಲೇ ನಡೆಸಬೇಕೆಂದು ಒತ್ತಾಯಿಸಿ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಡೀಸಿಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

Advertisement

ಖಾಸಗೀಕರಣಕ್ಕೆ ಪ್ರಯತ್ನ ಸರಿಯಲ್ಲ: ಜೀವನಾಡಿ ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಬೇಕು ಎಂದು ರೈತರು, ಜನಪರ ಹೋರಾಟಗಾರರು ಮತ್ತು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಹಲವು ಬಾರಿ ಮನವಿ ಸಲ್ಲಿಸಿದರು. ಆದರೂ ಕಾರ್ಖಾನೆ ಆರಂಭಿಸುವ ಬದಲು ಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಇದಲ್ಲದೆ ಸರ್ಕಾರ ತಾನೇ ನೇಮಿಸಿದ ತಜ್ಞರ ಸಮಿತಿಯ ವರದಿಯನ್ನು ಗಮನಕ್ಕೆ ತೆಗೆದುಕೊಳ್ಳದೇ ಒ ಆ್ಯಂಡ್‌ ಎಂ ಹೆಸರಿನ ಖಾಸಗೀಕರಣಕ್ಕೆ ಪ್ರಯತ್ನಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರವೇ ನಡೆಸಲಿ: ಕಾರ್ಖಾನೆಗೆ ನೂರಾರು ಕೋಟಿ ಅನುದಾನ ನೀಡಲಾಗಿದೆ. ಅದು ದುರುಪಯೋಗವಾಗಿದೆ. ಅದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಕಾರ್ಖಾನೆಯ ಒಡೆತನದಲ್ಲಿದೆ. ಖಾಸಗಿಯವರಿಗೆ ವಹಿಸಿದರೆ ಆಸ್ತಿ ಖಾಸಗಿಯವರ ಪಾಲಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮೈಷುಗರ್‌ ಕಾರ್ಖಾನೆಯನ್ನು ಖಾಸಗಿ ಹಾಗೂ ಒ ಅಂಡ್‌ ಎಂಗೆ ವಹಿಸದೆ ಸರ್ಕಾರವೇ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಸದಸ್ಯರಾದ ಸುನಂದಾ ಜಯರಾಂ, ಮುದ್ದೇಗೌಡ, ಎಂ.ಬಿ.ಶ್ರೀನಿವಾಸ್‌, ಇಂಡುವಾಳು ಚಂದ್ರಶೇಖರ್‌,ಕೆ.ಬೋರಯ್ಯ ಇತರರಿದ್ದರು.

ಸೇವಾ ಭದ್ರತೆಗೆ ಆಗ್ರಹ: ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ತಲಾ10 ಲಕ್ಷ ರೂ., ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಡೀಸಿ ಕಚೇರಿ ಮುಂಭಾಗ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಅತಿಥಿ ಉಪನ್ಯಾಸಕರಿಗೆ ಸಂಕಷ್ಟ: ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಇಲ್ಲದೆ ಕಷ್ಟ ಅನುಭವಿಸುವಂತಾಗಿದೆ. ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ, ಪ್ರಯೋಜನವಾಗಿಲ್ಲ. ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಿದ್ದರೆ ಮುಂದಿನ ದಿನದಲ್ಲಿ ಸಿಎಂ ಮನೆಗೆ ಹಾಗೂ ಡೀಸಿ, ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂಭಾಗ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.

ಕಾಲೇಜು ಆರಂಭಿಸಿ: ಹರಿಯಾಣ, ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮಾದರಿಯಲ್ಲಿ ವೇತನ ಮತ್ತು ಉದ್ಯೋಗದ ಜತೆ ಘೋಷಿಸ ಬೇಕು. ಲಾಕ್‌ಡೌನ್‌ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ ನೀಡಬೇಕು. ನ.1ರಿಂದ ಕಾಲೇಜುಗಳನ್ನು ಪುನರಾರಂಭಿಸಬೇಕು. ಸಹಾಯಕ ಪ್ರಾಧ್ಯಾಪಕರ ಅನಗತ್ಯ ನಿಯೋಜನೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಬಿ.ಎಸ್‌ .ನಾಗರಾಜು, ಸೋಮಶೇಖರ್‌, ದೇವರಾಜು, ಶಿಲ್ಪಾಶ್ರೀ, ರಂಜಿತ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next