Advertisement

ನಾ|ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

04:15 PM Sep 27, 2020 | Suhan S |

ಕಲಬುರಗಿ: ಸಾಮಾಜಿಕ ನ್ಯಾಯದಿಂದ ವಂಚಿತವಾದ ಮಾದಿಗ ಸಮಾಜಕ್ಕೆ ನ್ಯಾಯ ಒದಗಿಸಲು ನ್ಯಾ| ಎ.ಜಿ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಜನ ಜಾಗೃತಿ ಸಂಘರ್ಷ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ಮಾಡಲಾಯಿತು.

Advertisement

ನ್ಯಾ| ಎ.ಜಿ. ಸದಾಶಿವ ಆಯೋಗದ ವರದಿ ಜಾರಿ ಹಲವು ವರ್ಷಗಳ ಬೇಡಿಕೆಯಾಗಿದೆ. ಬಿಜೆಪಿ ಸರ್ಕಾರ ಯಾರ ಒತ್ತಡ ಹಾಗೂ ಪ್ರಭಾವಕ್ಕೆ ಒಳಗಾಗದೇ ಸಚಿವ ಸಂಪುಟದಲ್ಲಿ ವರದಿ ಮಂಡಿಸಬೇಕು. ಅದನ್ನು ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಪ್ರತಿಭಟನಾನಿತರರು ಆಗ್ರಹಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶಿವಶರಣ ಮಾದರ ಚನ್ನಯ್ಯ ಅಧ್ಯಯನ ಪೀಠದ ಕಟ್ಟಡ ನಿರ್ಮಾಣಕ್ಕೆ ಐದು ಕೋಟಿ ರೂ. ಅನುದಾನ ಮಂಜೂರಾತಿಗೆ ಆದೇಶ ಹೊರಡಿಸಬೇಕು. ತಮಟೆ ಬಾರಿಸುವ ಸಮುದಾಯದ ಜನರಿಗೆ ಮಾಸಿಕ ವೇತನ ಜಾರಿ ಮಾಡಬೇಕು. ರಸ್ತೆ ಬದಿಯಲ್ಲಿ ಹಳೆ ಪಾದರಕ್ಷೆ ಹೋಲಿದು ಜೀವನ ಸಾಗಿಸುತ್ತಿರುವವರ ಸಮೀಕ್ಷೆ ಮಾಡಬೇಕು. ವಸತಿ ಯೋಜನೆಯಡಿ ನಿಜವಾದ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಡಬೇಕು. ಚರ್ಮ ಕುಟೀರ್‌ ಗಳ ಯಾವುದೇ ಲೋಪಗಳು ಆಗದಂತೆ ತಡೆಯಬೇಕು. ಸರ್ಕಾರಿ ಯೋಜನೆಗಳ ಬಗ್ಗೆ ಪ್ರಚಾರ ಮಾಡದ ಜಿಲ್ಲಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಬೇಕು ಹಾಗೂ ವಸತಿ ರಹಿತರ ಸಮೀಕ್ಷೆ ನಡೆಸಬೇಕೆಂದು ಡಿಸಿ ಮೂಲಕ ಸಿಎಂಗೆ ಮನವಿ ಮಾಡಲಾಯಿತು.

ರುಕ್ಕಪ್ಪ ಕಾಂಬಳೆ, ರಾಮಾ ಪೂಜಾರಿ, ಅಮೀರಸಾಬ ನದಾಫ್‌, ಜೈರಾಜ ಕಣಗಿಕರ, ವಿಜಯಕುಮಾರ ಪೂಜಾರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next