ತುಮಕೂರು: ಕೋವಿಡ್-19 ನಿಂದಸಂಕಷ್ಟದಲ್ಲಿರುವ ಅನುದಾನ ರಹಿತ ಖಾಸಗಿ ಶಾಲೆಗಳಅಭಿವೃದ್ಧಿಗೆ 1000 ಕೋಟಿ ರೂ.ಗಳ ವಿಶೇಷ ಆರ್ಥಿಕಪ್ಯಾಕೇಜ್ ಘೋಷಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದಜಿಲ್ಲಾಧ್ಯಕ್ಷ ಡಾ.ಹಾಲನೂರು ಲೇಪಾಕ್ಷ ನೇತೃತ್ವದಲ್ಲಿಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸ ಗಿಶಾಲೆಗಳ ಒಕ್ಕೂಟ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿದ್ದ ಈ ಹೋರಾಟದಲ್ಲಿ ಖಾಸಗಿ ಶಾಲೆಗಳಆಡಳಿತ ಮಂಡಳಿ ಹಾಗೂ ಶಾಲೆಯ ಸಿಬ್ಬಂದಿಭಾಗವಹಿಸಿ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿದರು.
ಸರ್ಕಾರದಿಂದ ಮಲತಾಯಿ ಧೋರಣೆ: ಈ ವೇಳೆಜಿಲ್ಲಾ ಘಟಕದ ಅಧ್ಯಕ್ಷ ಡಾ.ಹಾಲನೂರು ಲೇಪಾಕ್ಷಮಾತನಾಡಿ, ರಾಜ್ಯದಲ್ಲಿ ಕಳೆದ 9 ತಿಂಗಳಿನಿಂದ ಕೋವಿಡ್-19 ಮಹಾಮಾರಿಯಿಂದ ಖಾಸಗಿಶಾಲೆಗಳ ಆಡಳಿತ ಮಂಡಳಿ ಸಂಕಷ್ಟಕ್ಕೆ ಸಿಲುಕಿದೆ. ಶಾಲೆಗಳ ನಡೆಯದ ಕಾರಣ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಹಲವಾರು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವರ ಅನುಕೂಲಕ್ಕಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ಘೋಷಿಸುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿಗಳು ಮತ್ತುಶಿಕ್ಷಣ ಸಚಿವರು ಅನುದಾನರಹಿತ ಶಾಲೆಗಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಚ್ಚುವ ಹಂತಕ್ಕೆ ಬಂದ ಶಾಲೆಗಳು: ರಾಜ್ಯದಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ತಮ್ಮ ಪ್ರಮುಖ 15 ಬೇಡಿಕೆಗಳನ್ನುಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ. ಇದರ ಹಲವಾರು ಮನವಿಗಳಿಗೆ ಸರ್ಕಾರಸ್ಪಂದಿಸುತ್ತಿಲ್ಲ. ಅಲ್ಲದೆ ನ.10 ರಂದು ಶಿಕ್ಷಣ ಇಲಾಖೆ ಒಂದು ಅವೈಜ್ಞಾನಿಕವಾದ ಸುತ್ತೋಲೆಯನ್ನುಹೊರಡಿಸಿದ್ದು, ಇದರಿಂದಾಗಿ 10 ಸಾವಿರಕ್ಕೂ ಹೆಚ್ಚು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದೆ ಎಂದರು. ಈ ಬಗ್ಗೆ ಹಲವು ಬಾರಿ ಶಿಕ್ಷಣ ಸಚಿವರಿಗೆಭೇಟಿಯಾಗಿ ಆಗುತ್ತಿರುವ ತೊಂದರೆಗಳ ಬಗ್ಗೆಮನವರಿಕೆ ಮಾಡಿಕೊಟ್ಟಿದ್ದರೂ, ಸುತ್ತೋಲೆ ವಾಪಸ್ ಪಡೆಯುತ್ತಿಲ್ಲ. ಕೂಡಲೇ ಶಿಕ್ಷಣ ಸಚಿವರು ತಮ್ಮ ಸ್ಥಾನದಿಂದ ಕೆಳಗೆ ಇಳಿಯ ಬೇಕೆಂಬುದು ನಮ್ಮ ಒತ್ತಾಯಿಸಿದರು.
ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಲ್ಲ: ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆಒತ್ತಾಯಿಸಿ ಸಾಂಕೇತಿಕವಾಗಿ ಜಿಲ್ಲಾಧಿ ಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರನಮ್ಮ ಬೇಡಿಕೆಗೆ ಸ್ಪಂದಿಸ ದಿದ್ದಲ್ಲಿ ಜ.6 ರಿಂದಬೆಂಗಳೂರು ಚಲೋ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಅಂದು ರಾಜ್ಯದ 30ಜಿಲ್ಲೆಗಳಿಂದಲೂ ಸಾವಿರಾರು ಸಂಖ್ಯೆಯ ಸಿಬ್ಬಂದಿ ಸ್ವಾತಂತ್ರ್ಯ ಉದ್ಯಾನವನಕ್ಕೆ ಬಂದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ ಖಾಸಗಿಅನುದಾನರಹಿತ ಶಾಲಾ ಅಡಳಿತ ಮಂಡಳಿ ಒಕ್ಕೂಟಟ್ರಸ್ಟ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್,ದೇವೇಗೌಡ, ಟಿ. ಚಂದ್ರಶೇಖರ್, ಕುಮಾರಸ್ವಾಮಿ, ನಯಾಜ್ ಅಹಮದ್, ಚನ್ನಬಸವೇಶ್ವರಸ್ವಾಮಿ, ಲ್ಯಾನ್ಸಿಪಾಯಸ್ ನಾರಾಯಣಮೂರ್ತಿ, ನಿಖೀಲ್ ಸೇರಿದಂತೆ ಖಾಸಗಿ ಶಾಲೆಗಳ ಬೋಧಕ ಮತ್ತು ಬೋಧಕೇತರಸಿಬ್ಬಂದಿ ಭಾಗವಹಿಸಿದ್ದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.