Advertisement

ಹಾಲಿನ ಖರೀದಿ ಬೆಲೆ ಹೆಚ್ಚಿಸಲು ಒತ್ತಾಯ

12:41 PM Nov 26, 2020 | Suhan S |

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಸಂದರ್ಭದಲ್ಲಿ ರೈತರಿಂದ ಖರೀದಿಸುವ ಹಾಲಿನ ಬೆಲೆಯಲ್ಲಿ ಕಡಿತ ಮಾಡಿರುವ 4 ರೂ.ಗಳನ್ನು ರೈತರ ಖಾತೆಗೆ ಜಮಾ ಮಾಡದೇ ಇದ್ದರೆ ಹಾಗೂ ರೈತರಿಂದಖರೀದಿಸುವಹಾಲಿನ ಬೆಲೆ ಹೆಚ್ಚು ಮಾಡದಿದ್ದರೆ ಹೋರಾಟ ನಡೆಸಲಾಗುವುದು ಎಂದುಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌ ಹೇಳಿದರು.

Advertisement

ನಗರದ ಬೆಸೆಂಟ್‌ ಪಾರ್ಕ್‌ನಲ್ಲಿ ಬುಧವಾರ ನಡೆದ ಬಮೂಲ್‌ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾದೇಶಿಕ ಸಭೆಯಲ್ಲಿಮಾತನಾಡಿ,ರೈತರು ಪ್ರಶ್ನೆ ಮಾಡಿಲ್ಲಅಂದ ಮಾತ್ರಕ್ಕೆ ಇದು ರೈತರ ಅಸಹಾಯಕತೆ ಎಂದು ಭಾವಿಸದೆಈಗ ಬೆಲೆ ಹೆಚ್ಚು ಮಾಡಬೇಕು. ಲಾಕ್‌ಡೌನ್‌  ಸಂದರ್ಭ ದಲ್ಲೂ ಸಹ ರೈತರು, ಸಹಕಾರ ಸಂಘದ ಹಾಗೂ ಒಕ್ಕೂಟದ ಸಿಬ್ಬಂದಿ ಕೆಲಸ ನಿರ್ವಹಿದ್ದಾರೆ. ಆದರೆ ರೈತರಿಂದ ಖರೀದಿಸುವ ಹಾಲಿಗೆ ಮಾತ್ರ ಬೆಲೆ ಕಡಿತಮಾಡಲಾಗಿದೆ. ಒಕ್ಕೂಟದಲ್ಲಿ ಕೆಲಸ ಮಾಡುವ ಅಧಿಕಾರಿಗಳ ಸಂಬಳ ಮಾತ್ರಕಡಿಮೆಯಾಗಿಲ್ಲ. ಆದರೆ ರೈತರ ಹಾಲಿನ ಬೆಲೆ ಏಕೆ ಕಡಿತ ಮಾಡಬೇಕು ಎಂದು ಪ್ರಶ್ನಿಸಿದರು. ಸದ್ಯಕ್ಕೆ8 ಸಾವಿರ ಟನ್‌ಹಾಲಿನ ಪುಡಿ ದಾಸ್ತಾನು ಇದೆ. ಇದರಿಂದ ರಾಜ್ಯದ ಎಲ್ಲಾ ಮಹಾ ಮಂಡಲಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರೈತರ ಮೇಲೆ ಬೀರಲಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಸಂದರ್ಭದಲ್ಲಿ ಜಾರಿಗೆ ತರಲಾದ ಕ್ಷೀರಭಾಗ್ಯಯೋಜನೆಯಿಂದ ರೈತರ ಹಾಲಿಗೆ ಬೇಡಿಕೆ ಹೆಚ್ಚಾಗಿತ್ತು. ಅಲ್ಲದೆ ಪ್ರತಿ ಲೀಟರ್‌ ಹಾಲಿಗೆ 3ಪ್ರೋತ್ಸಾಹ ಧನವನ್ನು ನೀಡಿದ್ದರು. ಈ ಬಾರಿ ತಾಲೂಕಿನಲ್ಲಿ ರಾಗಿ ಇಳುವರಿ ಉತ್ತಮವಾಗಿದೆ. ಇದರಿಂದಾಗಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದ್ದರು ಯಾವುದೇ ರೀತಿಯ ಸ್ಪಂದನೆ ಇಲ್ಲದಾಗಿದೆ. ಅಲ್ಲದೆ ಒಂದು ಎಕರೆಗೆ ಇಂತಷ್ಟೇ ಚೀಲ ರಾಗಿ ಖರೀದಿ ಮಾಡಬೇಕು ಎನ್ನುವ ಮಿತಿಯನ್ನು ಹಾಕಿರುವುದು ಸರಿಯಲ್ಲ ಎಂದು ತಿಳಿಸಿದರು.

ತಾಲೂಕಿನ ರೈತರು ಸರಬರಾಜು ಮಾಡುವ ಹಾಲಿಗೆ ಪ್ರತಿ ತಿಂಗಳು 11 ಕೋಟಿ ಖರೀದಿ ಹಣ ಹಾಗೂ ಸಹಾಯಧನವಾಗಿ 2 ಕೋಟಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹಾಲಿನ ಟೆಟ್ರಾಪ್ಯಾಕ್‌ ಹಾಗೂ ಪಶು ಆಹಾರ ತಯಾರಿಕಾ ಘಟಕ ಸ್ಥಾಪನೆಗೆ ಭೂಮಿ ನೀಡಲಾಗುವುದು ಕೆಎಂಎಫ್‌ ವತಿಯಿಂದ ಎರಡೂ ಘಟಕಗಳ ಸ್ಥಾಪನೆ ಮಾಡಬೇಕು ಎಂದರು.

ಇತ್ತೀಚೆಗಷ್ಟೇ ನಿಧನರಾದ ತಾಲೂಕಿನ ಬಮೂಲ್‌ ಮಾಜಿ ನಿರ್ದೇಶಕ ಎನ್‌.ಹನುಮಂತೇಗೌಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ, ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ, ಟಿಎಪಿಎಂಸಿಎಸ್‌ ಅಧ್ಯಕ್ಷ ಡಿ. ಸಿದ್ದರಾಮಣ್ಣ, ಕಾಂಗ್ರೆಸ್‌ ಮುಖಂಡರಾದ ತಿ.ರಂಗರಾಜು, ಬಿ.ಎಚ್‌.ಕೆಂಪಣ್ಣ, ಬಮೂಲ್‌ ಪ್ರಧಾನ ವ್ಯವಸ್ಥಾಪಕ ಬಿ.ಕೆ. ಜಗದೀಶ್‌,ವ್ಯವಸ್ಥಾಪಕ ಮಾಯಣ್ಣ, ಬಮೂಲ್‌ ಕಲ್ಯಾಣ ನಿಧಿ ಟ್ರಸ್ಟ್‌ ಸಿಇಒ ಡಾ.ಪ್ರಸನ್ನ ಕುಮಾರ್‌,ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರದ ವ್ಯವಸ್ಥಾಪಕ ಡಾ. ಗೋಪಾಲಕೃಷ್ಣ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next