ದಾವಣಗೆರೆ: ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೀಡಾದವರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ಕೊಳೆಗೇರಿ ನಿವಾಸಿಗಳನ್ನು ಕಡೆಗಣಿಸಿದೆಎಂದು ಆರೋಪಿಸಿ ಶುಕ್ರವಾರ ಸ್ಲಂ ಜನಾಂದೋಲನ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವಕೃಷಿಕರು, ಕ್ಷೌರಿಕರು, ಶ್ರಮಿಕರು,ಆಟೋ ಚಾಲಕರು, ಹಮಾಲಿಗಳು, ಭಟ್ಟಿ ಕಾರ್ಮಿಕರು, ಚಮ್ಮಾರರು,ಗೃಹ ಕಾರ್ಮಿಕರು, ಟೈಲರ್‌ಗಳುಸೇರಿದಂತೆ ಇತರೆ ಸಮುದಾಯಗಳಿಗೆ 1,250 ಕೋಟಿ ಆರ್ಥಿಕಪರಿಹಾರ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ನಗರಗಳ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಶೇ.45 ಜನರನ್ನ ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.
ಬಡತನ ರೇಖೆಯಿಂದ ಕೆಳಗಿರುವ ಬಿಪಿಎಲ್ ಕುಟುಂಬಗಳಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮೇ, ಜೂನ್‌ತಿಂಗಳಿಗೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ 5ಕಿಜಿ ಅಕ್ಕಿ ಉಚಿತ ವಿಸ್ತರಣೆಯಕೇಂದ್ರ ಸರ್ಕಾರದ ಘೋಷಣೆ ಪುನರ್ ವ್ಯಾಖ್ಯಾನಿಸುವುದನ್ನು ಬಿಟ್ಟರೇ ಬೇರಾವುದೇ ವಿಶೇಷತೆ ಇಲ್ಲ.
ಆರ್ಥಿಕ ಪರಿಹಾರ ಘೋಷಣೆಯಲ್ಲಿ ನಗರ ವಂಚಿತ ಸಮುದಾಯವಾದ ಸ್ಲಂ ಜನರಿಗೆ ಆದ್ಯತೆ ನೀಡದೇ ಇರುವುದು ಅತ್ಯಂತ ಖಂಡನೀಯ. ಕೊರೊನಾವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ಸರ್ಕಾರ ರಾಷ್ಟ್ರೀಯ ವಿಪತ್ತಿನ ಮಾನದಂಡಗಳ ಅನ್ವಯ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಎಲ್ಲ ಬಿಪಿಎಲ್‌ಕುಟುಂಬಗಳಿಗೆ ಮತ್ತು ಕೊಳೆಗೇರಿ ನಿವಾಸಿಗಳಿಗೆ ಲಾಕ್‌ಡೌನ್ ಆರ್ಥಿಕಪರಿಹಾರವಾಗಿ ಮೂರು ತಿಂಗಳು ತಲಾ10 ಸಾವಿರ ಭತ್ಯೆ ಘೋಷಿಸಬೇಕು. ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯ ವಿಪತ್ತುಪರಿಹಾರದ ಮಾನದಂಡದಂತೆಮೂರು ತಿಂಗಳು (ಪಡಿತರ ವಿತರಣೆ ಹೊರತು ಪಡಿಸಿ) ತಲಾ 10 ಕೆಜಿಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಎಲ್ಲ ನಾಗರಿಕರಿಗೆ ಉಚಿತವಾಗಿ ಕಾಲಮಿತಿಯಲ್ಲಿ ಲಸಿಕೆ ನೀಡಬೇಕು ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು.
ಕೋವಿಡ್ ಸಂಬಂಧಿತ ಚಿಕಿತ್ಸೆಯನ್ನ ಉಚಿತಗೊಳಿಸಿ ಮತ್ತು ಸರ್ಕಾರವೇ ಅದರ ವೆಚ್ಚವನ್ನು ಸಂಪೂರ್ಣವಾಗಿ ಭರಿಸಬೇಕು. ಕೊರೊನಾದಿಂದ ಸಾವಿಗೀಡಾದ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಈಗ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ಜಾರಿಗೆ ಇಚ್ಛಾಶಕ್ತಿ, ಬದ್ಧತೆ ತೋರಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾ ಸಂಚಾಲಕಿ ರೇಣುಕಾ ಯಲ್ಲಮ್ಮ, ಶಬೀರ್‌ಸಾಬ್ ಇತರರು ಇದ್ದರು.