ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, 5 ತಿಂಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಶಿವಸೇನಾ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ.30 ರ ಸೋಮವಾರ ಶಿವಸೇನಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದ್ದು, ಈ ಕುರಿತು ಶಿವಸೇನಾ ಪಕ್ಷ ಯಾವುದೇ ಮಾಹಿತಿ ಬಹಿರಂಗಗೊಳಿಸಿಲ್ಲ.
ಲೋಕಸಭಾ ಚುನಾವಣೆ ವೇಳೆಗೆ ಮಾರ್ಚ್ 2019ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಇವರು, ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತು ಸೆಪ್ಟೆಂಬರ್ 2019ರಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಶಿವಸೇನಾ ಪಕ್ಷಕ್ಕೆ ದಾಪುಗಾಲಿರಿಸಿರುವುದು ಹಲವು ಕೂತೂಹಲಕ್ಕೆ ಎಡೆಮಾಡಿದೆ.
ಇದನ್ನೂ ಓದಿ: 50 ವರ್ಷ ಪೂರೈಸಿದ್ದರಷ್ಟೇ ವಿಂಟೇಜ್ ವಾಹನ! ಸರ್ಕಾರದ ಹೊಸ ನಿಯಮ
ಈ ಕುರಿತು ಪ್ರತಿಕ್ರಿಯಿಸಿರುವ ಊರ್ಮಿಳಾ “ನನ್ನ ರಾಜಕೀಯ ಮತ್ತು ಸಾಮಾಜಿಕ ಸಂವೇದನೆಗಳು, ಕಾಂಗ್ರೆಸ್ ಪಕ್ಷದಲ್ಲಿನ ಪಟ್ಟಭದ್ರ ಹಿತಾಸಕ್ತಿಗಳೊಂದಿಗೆ ಕೆಲಸ ಮಾಡಲು ನಿರಾಕರಿಸುತ್ತವೆ” ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಂಜಯ್ ನಿರುಪಮ್ ಅವರ ಆಪ್ತ ಸಹಾಯಕರನ್ನು ಟೀಕಿಸಿರುವ ಪತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದ ನಂತರ ರಾಜೀನಾಮೆ ನೀಡುವ ಚಿಂತನೆ ತನ್ನ ಬಳಿಗೆ ಬಂದಿದೆ ಎಂದು ಊರ್ಮಿಳಾ ತಿಳಿಸಿದ್ದರು.
ಇದನ್ನೂ ಓದಿ: ಬಿಜೆಪಿ ಸರ್ಕಾರ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತಿದೆ: ಯು.ಟಿ.ಖಾದರ್