ವಾಷಿಂಗ್ಟನ್: ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಪಿಪಿಇ ಕಿಟ್ ಧರಿಸಿ ಕೆಲಸ ಮಾಡುತ್ತಿರುವ ವೈದ್ಯರ ಸ್ಥಿತಿ ಇದು: ವೈದ್ಯ ಹೇಳಿದ ಮಾತೇನು ಗೊತ್ತಾ?
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿರುವ ಪ್ರಯಾಣ ನಿರ್ಬಂಧದಲ್ಲಿ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಪತ್ರಕರ್ತರಿಗೆ ವಿನಾಯ್ತಿ ನೀಡಲಾಗಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ವಿವರಿಸಿದೆ.
ಮೇ 4ರಿಂದ ಭಾರತದಿಂದ ಅಮೆರಿಕಕ್ಕೆ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜೋ ಬೈಡೆನ್ ಘೋಷಿಸಿದ ಅರ್ಧ ಗಂಟೆ ಬಳಿಕ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿನ್ ಕೆನ್ ಅವರು ಈ ವಿನಾಯ್ತಿಯನ್ನು ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ಅಮೆರಿಕ ವಿದೇಶಾಂಗ ಇಲಾಖೆಯ ಪ್ರಕಾರ, ಪ್ರಯಾಣ ನಿಷೇಧದ ವಿನಾಯ್ತಿಯಲ್ಲಿ ಬ್ರೆಜಿಲ್, ಚೀನಾ, ಇರಾನ್ ಮತ್ತು ದಕ್ಷಿಣ ಆಫ್ರಿಕಾದ ಕೆಲವು ವರ್ಗದ ಪ್ರಯಾಣಿಕರು ಸೇರಿರುವುದಾಗಿ ತಿಳಿಸಿದೆ.