Advertisement

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

03:35 PM Jun 15, 2021 | Team Udayavani |

ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.

Advertisement

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.

ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next