ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯ ಮುಂದೆ ಬಂದಿದೆ. ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿ ಮಾಡಿದ ಇಲಿನಾಯ್ಸ್ ವಿಶ್ವವಿದ್ಯಾಲಯ ಅಧ್ಯಕ್ಷ ತಿಮಫಟಿ ಕಿಲೆನ್ ನೇತೃತ್ವದ ತಂಡ ಈ ಸಂಬಂಧ ಮಾತುಕತೆ ನಡೆಸಿತು.
ರಾಜ್ಯದ ಎಂ.ಎಸ್.ರಾಮಯ್ಯ ವಿವಿ ಜತೆ ಮೂರು ವರ್ಷಗಳಿಂದ ಇಲಿನಾಯ್ಸ್ ವಿವಿ ಕೆಲಸ ಮಾಡುತ್ತಿದ್ದು, ಈಗ ಇತರ ವಿವಿಗಳ ಜತೆಗೂ ಕೆಲಸ ಮಾಡಲು ಮುಂದಾಗಿದೆ. ಈ ನಿರ್ಧಾರವನ್ನು ರಾಜ್ಯ ಸರ್ಕಾರ ಸ್ವಾಗತಿಸಿದೆ ಎಂದು ಡಿಸಿಎಂ ತಿಳಿಸಿದರು. ಶಿಕ್ಷಣ, ತಂತ್ರಜ್ಞಾನ, ಕೌಶಲ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ತಂತ್ರಜ್ಞಾನ, ದೂರ ಶಿಕ್ಷಣ, ಕೃಷಿ ಮುಂತಾದ ಕ್ಷೇತ್ರಗಳಲ್ಲಿ ಇಲಿನಾಯ್ಸ್ ವಿವಿ ಜತೆ ಕೆಲಸ ಮಾಡಲು ಆಸಕ್ತಿ ಇದೆ.
ವಿಶ್ವ ಮಟ್ಟದ ಉನ್ನತ ಶಿಕ್ಷಣ ನಮ್ಮ ರಾಜ್ಯದ ವಿದ್ಯಾ ರ್ಥಿಗಳಿಗೂ ಸಿಗಲಿ ಎಂಬ ಉದ್ದೇಶದಿಂದ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಹೊಸ ಆವಿಷ್ಕಾರಗಳತ್ತ ಮುಖ ಮಾ ಡುವ ಒಂದು ಭಾಗವಾಗಿ ವಿದೇಶಿ ವಿವಿಗಳ ಜತೆಗೂ ಒಡಂಬಡಿಕೆ ಮಾಡಿಕೊಳ್ಳಲಾಗು ತ್ತಿದ್ದು, ಇಂತಹ ಒಪ್ಪಂದಗಳು ಮತ್ತಷ್ಟು ಮುಂದುವರಿಯಲಿವೆ. ಈ ಸಂಬಂಧ ತಮ್ಮ ಕಾರ್ಯದರ್ಶಿ ಪ್ರದೀಪ್ ಅವರನ್ನು ಕೂಡಲೇ ಜಾರಿಗೆ ಬರುವಂತೆ ನೋಡಲ್ ಅಧಿಕಾರಿಯಾಗಿ ನೇಮಿಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಇಲಿನಾಯ್ಸ್ ವಿವಿ ಪ್ರತಿನಿಧಿಗಳು ಕೂಡ ನೋಡಲ್ ಅಧಿಕಾರಿಯನ್ನು ನೇಮಿಸಲು ಸ್ಥಳದಲ್ಲೇ ಒಪ್ಪಿಗೆ ಸೂಚಿಸಿದರು. ಬೆಂಗಳೂರು ಸೆಂಟ್ರಲ್ ವಿವಿ ಆವರಣದಲ್ಲಿ ಇಲಿಯಾನ್ಸ್ ವಿವಿ ಕಚೇರಿ ತೆರೆಯಲು ಜಾಗ ನೀಡುವುದಕ್ಕೂ ಇದೇ ಸಂದರ್ಭದಲ್ಲಿ ಒಪ್ಪಿಗೆ ಸೂಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
19 ಕೋಟಿ ರೂ. ಇಂಗ್ಲೆಂಡ್ ನೆರವು: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಸಂಶೋ ಧನೆ ಮಾಡುವ ಸಲುವಾಗಿ ಇಂಗ್ಲೆಂಡ್ ಸರ್ಕಾರ 19 ಕೋಟಿ ರೂ. ನೆರವು ನೀಡ ಲಿದೆ. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ ನೇತೃತ್ವದ ನಿಯೋಗ ಇತ್ತೀಚೆಗೆ ಇಂಗ್ಲೆಂಡ್ ಸಾಲೊರ್ಡ್ ವಿವಿಗೆ ಭೇಟಿ ನೀಡಿದ್ದ ವೇಳೆ ಇದಕ್ಕೆ ಒಪ್ಪಿಗೆ ಸಿಕ್ಕಿತ್ತು. ಇದಕ್ಕೆ ಪೂರಕವಾಗಿ ಸಂಶೋಧನೆಗೆ ಸಂಬಂ ಧಿಸಿದಂತೆ ಪ್ರಾಥಮಿಕ ವರದಿಗಳನ್ನು ಸಲ್ಲಿಸುವ ಕಾರ್ಯ ಆರಂಭವಾಗಿದ್ದು ಮೂರು ತಿಂಗಳಲ್ಲಿ ಹಣ ಬಿಡುಗಡೆ ಯಾಗಲಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.