ವಾಷಿಂಗ್ಟನ್ ಡಿಸಿ: ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವು “ವಿಶ್ವದ ಅತ್ಯಂತ ಪರಿಣಾಮಕಾರಿ” ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ಕಾರ್ಯತಂತ್ರದ ತಂತ್ರಜ್ಞಾನ ಪಾಲುದಾರಿಕೆಯನ್ನು ಇನ್ನಷ್ಟು ಉನ್ನತೀಕರಿಸಲು ಉಭಯ ದೇಶಗಳು ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ ಬಳಿಕ ಅಧ್ಯಕ್ಷ ಜೋ ಬಿಡನ್ ಭಾನುವಾರ ಟ್ವಿಟರ್ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.
“ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತದ ನಡುವಿನ ಸ್ನೇಹವು ವಿಶ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಮತ್ತು ಇದು ಹಿಂದೆಂದಿಗಿಂತಲೂ ಹೆಚ್ಚು ಬಲವಾದ, ಹತ್ತಿರ ಮತ್ತು ಹೆಚ್ಚು ಕ್ರಿಯಾತ್ಮಕವಾಗಿದೆ” ಎಂದು ಜೋ ಬಿಡೆನ್ ಟ್ವೀಟ್ ಮಾಡಿದ್ದಾರೆ.
ಬಿಡೆನ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ, ಪ್ರಧಾನಿ ಮೋದಿ ಅವರು ಯುಎಸ್-ಭಾರತದ ಸ್ನೇಹದ ಶಕ್ತಿಯನ್ನು ದೃಢಪಡಿಸಿದರು, “ನಾನು ನಿಮ್ಮೊಂದಿಗೆ ಸಂಪೂರ್ಣವಾಗಿ ಒಪ್ಪುತ್ತೇನೆ. ನಮ್ಮ ದೇಶಗಳ ನಡುವಿನ ಸ್ನೇಹವು ಜಾಗತಿಕ ಒಳಿತಿನ ಶಕ್ತಿಯಾಗಿದೆ. ಇದು ವಿಶ್ವವನ್ನು ಹೆಚ್ಚು ಸುಸ್ಥಿರಗೊಳಿಸುತ್ತದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೋಟಿ ಕೋಟಿ ಗಳಿಸಿದ “ದಿ ಕೇರಳ ಸ್ಟೋರಿ” ಓಟಿಟಿ ಖರೀದಿಗೆ ಯಾರೂ ಇಲ್ಲ: ನಿರ್ದೇಶಕ ಹೇಳಿದ್ದೇನು?
ಪ್ರಧಾನಿ ಮೋದಿ ಅವರು ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ವೇಳೆ ತಂತ್ರಜ್ಞಾನ ಉದ್ಯಮದ ಧುರೀಣರು, ವಾಣಿಜ್ಯೋದ್ಯಮಿಗಳು, ಅಧಿಕಾರಿಗಳು ಮತ್ತು ಸಿಇಒ ಗಳೊಂದಿಗೆ ರೌಂಡ್ ಟೇಬಲ್ ಸಭೆಗಳನ್ನು ನಡೆಸಿದ್ದರು.