Advertisement

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

08:57 AM Dec 17, 2024 | Team Udayavani |

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಡೊನಾಲ್ಡ್ ಟ್ರಂಪ್ ಗೆ ಆಘಾತವೊಂದು ಎದುರಾಗಿದೆ.

Advertisement

ಹಷ್ ಮನಿ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಯನ್ನು ರದ್ದುಗೊಳಿಸುವಂತೆ ಟ್ರಂಪ್ ಸಲ್ಲಿಸಿದ ಅರ್ಜಿಯನ್ನು ಅಮೆರಿಕದ ನ್ಯಾಯಾಧೀಶರು ಸೋಮವಾರ ರದ್ದುಗೊಳಿಸಿದ್ದಾರೆ, ನ್ಯಾಯಾಧೀಶರ ಈ ನಿರ್ಧಾರದ ಮೂಲಕ ಡೊನಾಲ್ಡ್ ಟ್ರಂಪ್ ಅವರು ಲೈಂಗಿಕ ಹಗರಣವನ್ನು ಮರೆಮಾಚಲು ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾರೆ ಎನ್ನಲಾಗಿದೆ.

ಹಷ್ ಮನಿ ಪ್ರಕರಣಕ್ಕೆ ಸಂಬಂಧಿಸಿ ಮ್ಯಾನ್ಹ್ಯಾಟನ್ ನ್ಯಾಯಾಧೀಶ ಜುವಾನ್ ಎಂ ಮಾರ್ಚೆನ್, ಟ್ರಂಪ್ ಅವರ ಅರ್ಜಿಯನ್ನು ತಿರಸ್ಕರಿಸಿದರು. ಈ ಸಮಯದಲ್ಲಿ, ಟ್ರಂಪ್ ಪರ ವಕೀಲರು ಪ್ರಕರಣವನ್ನು ಮುಂದುವರಿಸುವುದರಿಂದ ಅಧ್ಯಕ್ಷರಾಗಿ ಟ್ರಂಪ್ ಅವರು ಮುಂದುವರೆಯಲು ಅಡ್ಡಿಯಾಗುತ್ತದೆ ಅಲ್ಲದೆ ಸರ್ಕಾರವನ್ನು ಉತ್ತಮವಾಗಿ ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ವಾದಿಸಿದರು.

ಡೊನಾಲ್ಡ್‌ ಟ್ರಂಪ್‌ ಅವರು ಪೋರ್ನ್‌ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರೊಂದಿಗೆ ಸಂಬಂಧ ಮರೆಮಾಚಲು ಹಣ ನೀಡಿದ ಪ್ರಕರಣ ಸೇರಿದಂತೆ ಒಟ್ಟು 34 ಪ್ರಕರಣಗಳಲ್ಲಿ ಅಪರಾಧಿ ಎಂದು ತೀರ್ಪು ನೀಡಲಾಗಿದೆ ಅದರಂತೆ ಸೋಮವಾರ ಹಷ್ ಮನಿ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಏನಿದು ಹಷ್ ಮನಿ ಪ್ರಕರಣ:
ಡೊನಾಲ್ಡ್ ಟ್ರಂಪ್ 2006 ರಲ್ಲಿ ಪೋರ್ನ್ ತಾರೆ ಸ್ಟಾರ್ಮಿ ಡೇನಿಯಲ್ಸ್ ಅವರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದಾದ ಬಳಿಕ 2016 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಈ ವಿಷಯವು ಮುನ್ನೆಲೆಗೆ ಬಂದಿತ್ತು. ಅಲ್ಲದೆ ಈ ವಿಷಯವನ್ನು ಬಹಿರಂಗಗೊಳಿಸುವುದಾಗಿ ಪೋರ್ನ್ ತಾರೆ ಸ್ಟಾರ್ಮಿ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ ಇದರಿಂದ ತಪ್ಪಿಸಿಕೊಳ್ಳಲು ಟ್ರಂಪ್, ಸ್ಟಾರ್ಮಿ ಡೇನಿಯಲ್ಸ್ ಅವರಿಗೆ ರಹಸ್ಯವಾಗಿ ಹಣ ಪಾವತಿಸಿದ್ದರು ಎನ್ನಲಾಗಿದ್ದು ಇದಕ್ಕಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

Advertisement

ಡೊನಾಲ್ಡ್ ಟ್ರಂಪ್ ಅವರು ಜನವರಿ 20, 2025 ರಂದು ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next