Advertisement

Fake visa; ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಗೆ 2 ವರ್ಷ ಜೈಲು ಶಿಕ್ಷೆ

03:33 PM Dec 09, 2023 | Team Udayavani |

ಮಹಾರಾಜಗಂಜ್(ಉತ್ತರಪ್ರದೇಶ) : ನಕಲಿ ವೀಸಾ ದಾಖಲೆಗಳ ಮೂಲಕ ಭಾರತ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಯೊಬ್ಬನಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

Advertisement

ಎರಿಕ್ ಡೇನಿಯಲ್ ಬೆಕ್‌ವಿತ್ (36) ಎಂಬಾತನಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೌರಭ್ ಶ್ರೀವಾಸ್ತವ ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 15 ದಿನ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಹೇಳಿದೆ. 20,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ ಎಂದು ಎಎಸ್ಪಿ ಅತೀಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಮೆರಿಕ ಪ್ರಜೆಯು ನೇಪಾಳದಿಂದ ಭಾರತಕ್ಕೆ ಬರುತ್ತಿದ್ದ. ಭಾರತ-ನೇಪಾಳ ಗಡಿಯ ಸೊನೌಲಿ ಪ್ರದೇಶದಲ್ಲಿ ವಲಸೆ ಇಲಾಖೆ ದಾಖಲೆಗಳನ್ನು ಪರಿಶೀಲಿಸಿ ತನಿಖೆಯ ನಡೆಸಿದ ನಂತರ, ಆತನ ವೀಸಾ ದಾಖಲೆಗಳು ನಕಲಿ ಎಂದು ಕಂಡುಬಂದಿದೆ. ಮಾರ್ಚ್ 29 ರಂದು ಆತನನ್ನು ಬಂಧಿಸಿ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳು ಮತ್ತು ವಿದೇಶಿ ಕಾಯ್ದೆಯ ಸೆಕ್ಷನ್ 14 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ಹೇಳಿದರು.

ನಿಯಮಾನುಸಾರ ಸಂಬಂಧಪಟ್ಟ ರಾಯಭಾರಿ ಕಚೇರಿ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next