Advertisement

ರಕ್ಷಣಾ ಕ್ಷೇತ್ರಕ್ಕೆ ಬಲ: ಅಪಾಚೆ, MH ರೋಮೆಯೊ ಹೆಲಿಕಾಪ್ಟರ್ ಖರೀದಿಗೆ ಭಾರತ-ಅಮೆರಿಕ ಒಪ್ಪಂದ

10:14 AM Feb 26, 2020 | Nagendra Trasi |

ನವದೆಹಲಿ: ಭಾರತ ಮತ್ತು ಅಮೆರಿಕ ನಡುವೆ ರಕ್ಷಣೆ, ಆರೋಗ್ಯ ಕ್ಷೇತ್ರ ಸೇರಿದಂತೆ ಒಟ್ಟು 3 ಬಿಲಿಯನ್ ಡಾಲರ್ ಮೊತ್ತದ ಬೃಹತ್ ಮೂರು ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ಮಂಗಳವಾರ ಸಹಿ ಹಾಕಿದರು.

Advertisement

ಭಾರತ ಭೇಟಿಯ ಎರಡನೇ ದಿನವಾದ ಮಂಗಳವಾರ ಉಭಯ ನಾಯಕರು ಹೈದರಬಾದ್ ಹೌಸ್ ನಲ್ಲಿ ದ್ವಿಪಕ್ಷೀಯ ಒಪ್ಪಂದಗಳ ಕುರಿತು ಮಾತುಕತೆ ನಡೆಸಿದರು. ನಂತರ ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೊದಲನೆಯದಾಗಿ ಮಾನಸಿಕ ಆರೋಗ್ಯದ ಕುರಿತು ದ್ವಿಪಕ್ಷೀಯ ಒಪ್ಪಂದ, ಆರೋಗ್ಯ ಉಪಕರಣಗಳ ರಕ್ಷಣೆ ಕುರಿತು ಒಪ್ಪಂದ ಹಾಗೂ ತೈಲ ಕ್ಷೇತ್ರದಲ್ಲಿ ಸಹಕಾರ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಯಿತು. ಅಲ್ಲದೇ ಭಾರತೀಯ ಸೇನೆಗೆ ಮತ್ತಷ್ಟು ಬಲ ನೀಡುವ ನಿಟ್ಟಿನಲ್ಲಿ 24ಎಂಎಚ್, 60ಆರ್ ಸೀಹಾಕ್ ಹೆಲಿಕಾಪ್ಟರ್ ಖರೀದಿಗೆ ಭಾರತ ಮತ್ತು ಅಮೆರಿಕ ನಡುವೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next