Advertisement

2021ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಟ್ರಂಪ್‌ ಹೆಸರು ಶಿಫಾರಸು

12:06 AM Sep 10, 2020 | mahesh |

ವಾಷಿಂಗ್ಟನ್‌: ಮುಂದಿನ ವರ್ಷದ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರನ್ನು ಸೂಚಿಸಲಾಗಿದೆ. ಇಸ್ರೇಲ್‌ ಮತ್ತು ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ) ನಡುವೆ ಐತಿಹಾಸಿಕ ಶಾಂತಿ ಒಪ್ಪಂದ ಉಂಟು ಮಾಡುವಲ್ಲಿ ಟ್ರಂಪ್‌ ಮುಖ್ಯ ಭೂಮಿಕೆ ವಹಿಸಿರುವ ಹಿನ್ನೆಲೆಯಲ್ಲಿ ಅವರ ಹೆಸರನ್ನು ನೊಬೆಲ್‌ಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ನಾರ್ವೆಯ ಸಂಸದ ಕ್ರಿಶ್ಚಿಯನ್‌ ಟೈಬ್ರಿಂಗ್‌- ಜೆಡ್ಡೆ ತಿಳಿಸಿದ್ದಾರೆ.

Advertisement

ಅಮೆರಿಕ ಅಧ್ಯಕ್ಷರು ಉತ್ತಮ ಸಾಧನೆ ಮಾಡಿದ್ದಾರೆ. ಇದೇ ಪುರಸ್ಕಾರಕ್ಕಾಗಿ ನಾಮನಿರ್ದೇಶನಗೊಂಡ ಇತರರಿಗಿಂತ ಟ್ರಂಪ್‌ ಜಗತ್ತಿನಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದ ಟೈಬ್ರಿಂಗ್‌- ಜೆಡ್ಡೆ ಕೊಂಡಾಡಿದ್ದಾರೆ. ಅವರ ನೇತೃತ್ವದ ಸರ್ಕಾರ 2 ದೇಶಗಳ ನಡುವೆ ಶಾಂತಿ ಸ್ಥಾಪನೆಯಲ್ಲಿ ಹೆಚ್ಚಿನ ಪಾತ್ರ ವಹಿಸಿದೆ ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರ ವಿಚಾರವಾಗಿ ಇರುವ ಬಿಕ್ಕಟ್ಟು ಪರಿಹರಿಸುವಲ್ಲೂ ಮಧ್ಯಸ್ಥಿಕೆ ವಹಿಸುವುದಾಗಿ ಟ್ರಪ್‌ ಹೇಳಿದ್ದರು ಎಂದು ಜೆಡ್ಡೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next