Advertisement

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಮೆರಿಕ ಖಂಡನೆ

10:17 PM Aug 20, 2022 | Team Udayavani |

ನವದೆಹಲಿ: ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿರುವುದನ್ನು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ(ಯುಎಸ್‌ಸಿಐಆರ್‌ಎಫ್) ಖಂಡಿಸಿದೆ.

Advertisement

“ಇದು ನ್ಯಾಯಾಂಗವನ್ನು ಅಪಹಾಸ್ಯ ಮಾಡಿದಂತಿದೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ ಮಾಡಿದವರಿಗೆ ನಿರ್ಭಯತೆ ನೀಡಿದಂತಿದೆ’ ಎಂದು ಹೇಳಿದೆ.

ಇದೇ ವೇಳೆ, ಗುಜರಾತ್‌ ಕಾಂಗ್ರೆಸ್‌ ಶಾಸಕರೊಬ್ಬರು ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದು, ಅಪರಾಧಿಗಳ ಬಿಡುಗಡೆ ಆದೇಶವನ್ನು ವಾಪಸ್‌ ಪಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್‌ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುಷ್ಟರು, ಆಕೆಯ ಕುಟುಂಬದ 7 ಮಂದಿಯನ್ನು ಹತ್ಯೆಗೈದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next