Advertisement

ಅಮೆರಿಕದಲ್ಲಿ ಮುಂದುವರಿದ ಕೋವಿಡ್-19 ಆರ್ಭಟ: ಒಂದೇ ದಿನ 1,997 ಜನ ಬಲಿ

01:16 PM Apr 20, 2020 | Mithun PG |

ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ -19 ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ 1,997 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಆ ಮೂಲಕ ಒಟ್ಟಾರೆ ಬಲಿಯಾದವರ ಸಂಖ್ಯೆ 40,661ಕ್ಕೆ ಏರಿಕೆಯಾಗಿದೆ.

Advertisement

ವಿಶ್ವದಲ್ಲಿ ಭೀತಿಯನ್ನು ಸೃಷ್ಟಿಸಿರುವ ಈ ಮಾರಣಾಂತಿಕ ವೈರಸ್ ಗೆ ವಿಶ್ವದ ದೊಡ್ಡಣ್ಣ ತತ್ತರಿಸಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ದುಪ್ಪಟ್ಟಾಗುವ ಲಕ್ಷಣಗಳು ಗೋಚರಿಸುತ್ತಿದ್ದು ಈಗಾಗಲೇ 7,64,265 ಮಂದಿ ವೈರಾಣುವಿನಿಂದ ಬಳಲುತ್ತಿದ್ದಾರೆ. ಈ ಮೂಲಕ ಜಗತ್ತಿನಲ್ಲೇ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳನ್ನು ಹೊಂದಿರುವ  ದೇಶ ಎಂಬ ಕುಖ್ಯಾತಿಗೆ ಅಮೆರಿಕ ಪಾತ್ರವಾಗಿದೆ.

ಇಟಲಿ ಮತ್ತು ಫ್ರಾನ್ಸ್‌ನಲ್ಲೂ ಸಹ ಕೋವಿಡ್ 19  ಮರಣ ಮೃದಂಗ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.ಜಗತ್ತಿನಾದ್ಯಂತ ಕೋವಿಡ್ 19 ವೈರಸ್​ಗೆ 1,65,069 ಜನರು ಬಲಿಯಾಗಿದ್ದು  24,07,339 ಕ್ಕಿಂತ ಹೆಚ್ಚು ಜನರು ವೈರಾಣುವಿಗೆ ತುತ್ತಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next