ಸಿಯೋಲ್:ಉತ್ತರ ಕೊರಿಯಾದ ಅಣ್ವಸ್ತ್ರ ಬೆದರಿಕೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ವಿಸ್ತರಿತ ಜಂಟಿ ಸೇನಾ ಕವಾಯತನ್ನು ನಡೆಸಲು ಅಮೆರಿಕ ಮತ್ತು ದಕ್ಷಿಣ ಕೊರಿಯಾ ಮುಂದಾಗಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸಕ್ ಯಿಯೋಲ್ ಶನಿವಾರ ನಡೆಸಿದ ಮಾತುಕತೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿಶೇಷವೆಂದರೆ, ಉಭಯ ದೇಶಗಳ ಹಾಲಿ ಅಧ್ಯಕ್ಷರಿಬ್ಬರೂ ಉ.ಕೊರಿಯಾ ವಿಚಾರದಲ್ಲಿ ತಮ್ಮ ಹಿಂದಿನ ನಾಯಕತ್ವಕ್ಕೆ ಭಿನ್ನವಾದಂಥ ನಿರ್ಧಾರ ಕೈಗೊಂಡಿದ್ದಾರೆ.
ಇದನ್ನೂ ಓದಿ:ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಅಂದರೆ, ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಅವರು ಈ ರೀತಿಯ ಸಮರಾಭ್ಯಾಸವನ್ನು ಕೈಬಿಟ್ಟು, ಉ.ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್‌ರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.