Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರದ ಮೇಲೆ ತಮಿಳುನಾಡಿನ ಪ್ರಭಾವ ವಿಪರೀತವಾಗಿದೆ. ಸುಪ್ರೀಂಕೊರ್ಟ್ ಆದೇಶವೂ ಆಗಿಲ್ಲ, ಸಿಡಬ್ಲುಎಂಎ ಸಭೆಯೂ ಆಗಿಲ್ಲ. ಆದರೂ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ನಾಡಿನ ಜನತೆಗೆ ಮೋಸ ಮಾಡಿದೆ. ಇದರ ವಿರುದ್ಧ ನಮ್ಮ ಪಕ್ಷದ ವತಿಯಿಂದ ತೀವ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದರು.
ಬಿಜೆಪಿಯವರಿಗೆ ಪ್ರಧಾನಿಯನ್ನು ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸರಕಾರಕ್ಕೆ ನಿಜವಾದ ತಾಕತ್ತು, ಧಮ್ ಇದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು, ಧಮ್ಮಿನ ಬಗ್ಗೆ ಮಾತನಾಡುತ್ತಾರೆ. ನಿಮಗೆ ತಾಕತ್ತು ಧಮ್ ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂಕೋರ್ಟ್‌ನಲ್ಲಿ ವಾದ ಮಾಡಿ, ರಾಜ್ಯದ ಹಿತವನ್ನು ಕಾಪಾಡಲಿ ಎಂದರು.
Related Articles
ಮೈಸೂರು: ರಾಜ್ಯ ಸರಕಾರ ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂದು ಮೈಸೂ ರು-ಕೊಡಗು ಸಂಸದ ಪ್ರತಾಪ ಸಿಂಹ ಆರೋಪಿಸಿದರು. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಲೂ ಜಲಾಶಯಗಳಿಗೆ ಹೋಗಿ ನೋಡಿ. ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ. ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಸೆ.13ರಿಂದ ನೀರು ಹರಿಸಲಾಗುತ್ತಿದೆ ಎಂದ ರು.
Advertisement