Advertisement

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

12:12 PM Jun 05, 2023 | Team Udayavani |

ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Advertisement

ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದರು.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next