Advertisement

ನೀರು ಪೂರೈಕೆಗೆ ಅನುದಾನ ಬಳಸಿ

11:00 AM Jun 26, 2019 | Team Udayavani |

ಹಿರೇಕೆರೂರ: ಸರ್ಕಾರದ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಕುಡಿಯುವ ನೀರಿನ ಸಮಸ್ಯೆಗೆ ಬಳಸಬೇಕು. ಈ ಬಗ್ಗೆ ಸರ್ಕಾರವೇ ಸ್ಪಷ್ಟ ನಿರ್ದೇಶನ ನೀಡಿದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಸಿ.ಪಾಟೀಲ ಎಚ್ಚರಿಸಿದರು.

Advertisement

ಪಟ್ಟಣದ ತಾಲೂಕು ಪಂಚಾಯತ್‌ ಸಭಾಭವನದಲ್ಲಿ ನಡೆದ ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.

ಸತತ 5 ವರ್ಷಗಳಿಂದ ಬರಗಾಲ ಆವರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕುಡಿಯುವ ನೀರಿಗಾಗಿ ಈಗಾಗಲೆ 130 ಬೊರವೆಲ್ ಕೊರೆಸಲಾಗಿದೆ. 75 ಖಾಸಗಿ ರೈತರ ಬೊರವೆಲ್ಗಳಿಂದ ಹಾಗೂ ಟ್ಯಾಂಕರಗಳಿಂದ ನೀರು ಪೂರೈಲಾಗುತ್ತಿದ್ದರೂ ನೀರು ಸಾಕಾಗದೇ ಸಮಸ್ಯೆ ಎದುರಾಗುತ್ತಿದ್ದು, ಮಳೆ ಬರುವವರೆಗೆ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಸಬೇಕು. ಈ ಬಗ್ಗೆ ಗ್ರಾಪಂ ಅಧ್ಯಕ್ಷರು, ಪಿಡಿಒ ಅವರು ಜನರಿಗೆ ಮನವರಿಕೆ ಮಾಡಬೇಕು. ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆಬಾವಿಗಳ ಬಗ್ಗೆ ಎಂಜಿನಿಯರ್‌ ಮತ್ತು ಪಿಡಿಒ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ನಿಷ್ಪಕ್ಷಪಾತ ವರದಿ ತಯಾರಿಸಿ ನನ್ನ ಗಮನಕ್ಕೆ ತರಬೇಕು ಎಂದರು.

ನಂತರ ಬೋರವೆಲ್ ವಾಹನದ ಮಾಲೀಕರಿಗೆ ಹಣ ಸಂದಾಯ ಮಾಡಬೇಕು. ಇದರಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. 14 ಹಣಕಾಸು ಯೋಜನೆಯ ರೂಪುರೇಷೆ ನಿಯಮಗಳನ್ನು ಬದಲಿಸಿದ್ದು, ಈ ಯೋಜನೆಯ ಹಣ ಮೊದಲು ಚೆಕ್‌ ನೀಡಲಾಗುತ್ತಿತ್ತು. ಈಗ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಬಗ್ಗೆ ಪಿಡಿಒ ಅವರು ಗ್ರಾಪಂ ಅಧ್ಯಕ್ಷರ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಸಭೆಯಲ್ಲಿ ತಾಪಂ ಇಒ ಸಂತೋಷಕುಮಾರ ತಳಕಲ್, ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಪಂ ಅಧ್ಯಕ್ಷರು, ಪಿಡಿಒಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next