Advertisement
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ವಿಶ್ವ ಜಲ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಸಕಲ ಜೀವರಾಶಿಗಳಿಗೂ ನೀರು ಅತ್ಯಮೂಲ್ಯ ಸಂಪತ್ತು. ಆಹಾರವಿಲ್ಲದೇ ಸ್ವಲ್ಪ ಸಮಯ ಬದುಕಬಹುದು. ನೀರಿಲ್ಲದೇ ಬದುಕಲು ಸಾಧ್ಯವಿಲ್ಲ. ಹಾಗಾಗಿ ಇಡೀ ಜಗತ್ತಿನಲ್ಲಿ ನೀರಿನ ಸದ್ಬಳಕೆ ಆಗಬೇಕು ಹಾಗೂ ಮಳೆಗಾಲ ಸಂದರ್ಭದಲ್ಲಿ ಮಳೆ ನೀರು ಸಂಗ್ರಹಿಸಬೇಕು ಎಂಬುದೇ ವಿಶ್ವ ಜಲ ದಿನಾಚರಣೆ ಉದ್ದೇಶ ಎಂದರು.
Related Articles
Advertisement
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣಕುಮಾರ್ ಮಾತನಾಡಿ, ಆಫ್ರಿಕಾ, ಸೋಮಾಲಿಯಾರಾಷ್ಟ್ರಗಳಲ್ಲಿ ಸರ್ಕಾರವೇ ಪ್ರತಿ ವ್ಯಕ್ತಿಗೆ ದಿನಕ್ಕೆ 50 ಲೀಟರ್ ನೀರನ್ನು ಪಡಿತರ ರೀತಿ ವಿತರಿಸುತ್ತಿದೆ. ಇಂತಹ ಪರಿಸ್ಥಿತಿ ನಮ್ಮ ರಾಜ್ಯಕ್ಕೂ ಮುಂದೆ ಬರುವುದರಲ್ಲಿ ಅನುಮಾನವೇ ಇಲ್ಲ. ಸರ್ಕಾರ ನೀರಿನ ಸಂಪನ್ಮೂಲಗಳನ್ನು ರಕ್ಷಿಸುವ ಕುರಿತು ಕ್ರಮ ಕೈಗೊಳ್ಳಬೇಕು. ಕೂಡಲೇ ನೀರಿನ ಅಸಮರ್ಪಕ ಬಳಕೆ ಹಾಗೂ ಪೋಲು ಮಾಡುವ ವಿರುದ್ಧ ಕಠಿಣ ಕಾನೂನು ರೂಪಿಸಿ ನೀರನ್ನು ಸಂರಕ್ಷಿಸಬೇಕಿದೆ. ನೀರಿನ ಸಮರ್ಪಕ ಬಳಕೆ ಕುರಿತು ಕಾನೂನು ಜಾರಿ ಮಾಡಬೇಕೆಂದರು. ಎಂ.ಎಂ.ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಎಚ್. ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಲೋಕಿಕೆರೆ ಸಿದ್ದಪ್ಪ, ಸಹಾಯಕ ಪ್ರಾಧ್ಯಾಪಕಿ ಶಶಿಕಲಾ ಜಿ.ಎಂ, ಉಪನ್ಯಾಸಕಿ ರುಕ್ಸಾನ ಅಂಜುಂ ಎಮ್.ಎ ವೇದಿಕೆಯಲ್ಲಿದ್ದರು.