Advertisement
ಶಹಾಪುರ ತಾಲೂಕಿನ ಖಾನಾಪುರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದದೋರನಹಳ್ಳಿ ಹೋಬಳಿ ಮಟ್ಟದ 2018-19ನೇ ಸಾಲಿನ ಮುಂಗಾರು ಹಂಗಾಮಿನ ಸಮಗ್ರ ಕೃಷಿ ಅಭಿಯಾನ
ಹಾಗೂ ಕೃಷಿ ಸಂವಾದ, ವಿಜ್ಞಾನಿಗಳ ಜತೆ ರೈತರ ಸಂವಾದ, ಬೀಜೋಪಚಾರ ಆಂದೋಲನ ಕಾರ್ಯಕ್ರಮವನ್ನು ಜ್ಯೋತಿ ಬೆಳೆಗಿಸಿ ಉದ್ಘಾಟಿಸಿ ಅವರು ಮಾತನಾಡಿ, ಕೃಷಿ ಪ್ರಧಾನ ದೇಶದಲ್ಲಿ ರೈತ ಸಂಕಷ್ಟವನ್ನು ದೂರ ಮಾಡಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿ ರೈತನು ಆರ್ಥಿಕವಾಗಿ ಸದೃಢಗೊಳ್ಳುವಂತೆ ಮಾಡುತ್ತಿವೆ ಎಂದರು.
ಭೀಮರಾಯನ ಗುಡಿ ಕೃಷಿ ಮಹಾವಿದ್ಯಾಲಯದ ತೋಟಗಾರಿಕೆ ವಿಜ್ಞಾನಿ ಡಾ| ಜಯಪ್ರಕಾಶ ಮಾತನಾಡಿ,
ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ನಿಂಬೆ, ಪಪಾಯ, ಹೂವಿನ ಬೆಳೆ, ತರಕಾರಿ ಬೆಳೆಗಳ ಬಗ್ಗೆ ತಾಂತ್ರಿಕ ಮಾಹಿತಿ ಮತ್ತು ಬೆಳೆ ಬೆಳೆಯುವ ವಿಧಾನದ ಬಗ್ಗೆ ಸಮಗ್ರ ಮಾಹಿತಿ ನೀಡಿ, ಬಳಿಕ ರೈತರೊಂದಿಗೆ ಸಂವಾದ ನಡೆಸಿದರು.
ಬೇಸಾಯ ತಜ್ಞ ಡಾ| ಶಿವಾನಂದ ಹೊನ್ನಳ್ಳಿ ಮಾತನಾಡಿ, ಸಣ್ಣ ಮತ್ತು ಅತಿಸಣ್ಣ ರೈತರು ಸಮಗ್ರ ಕೃಷಿ ಪದ್ಧತಿಯಲ್ಲಿ ಹಣ್ಣಿನ ಬೆಳೆಗಳು, ತರಕಾರಿ ಬೆಳೆಗಳು, ಹೂವಿನ ಬೆಳೆಗಳು, ಆಡು, ಕುರಿ, ಕೋಳಿ ಸಾಕಾಣಿಕೆ ಮಾಡುವುದರಿಂದ ರೈತರಿಗೆ ಹೆಚ್ಚಿನ ಆದಾಯ ಬರುತ್ತದೆ ಎಂದು ತಿಳಿಸಿದರು.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ದಾನಪ್ಪ ಕತ್ನಳ್ಳಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಹೇಳಿದರು. ತೋಟಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ರೈತರಿಗೆ ದೊರಯುವ ಸೌಲಭ್ಯ ಮತ್ತು ತಾಂತ್ರಿಕತೆ ಮಾಹಿತಿ ನೀಡಿದರು.