Advertisement
ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರ ಸಂಘ ವತಿಯಿಂದ ವಿಜ್ಞಾನ ಉಪನ್ಯಾಸಕರಿಗೆ ಏರ್ಪಡಿಸಿದ್ದ ಪುನಃಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ ಮತ್ತು ಅದಕ್ಕೆ ಕಾರಣ ಏನು ಎಂದು ತಿಳಿದು ಬೋಧಿಸಬೇಕು. ಸಮಸ್ಯೆಯ ಬೇರು ಮಟ್ಟಕ್ಕೆ ಇಳಿದು ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ವಿಜ್ಞಾನ ವಿದ್ಯಾರ್ಥಿಗಳಿಗೋಸ್ಕರ ಇರುವ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಆಗುತ್ತಿಲ್ಲ. ಪ್ರಯೋಗಾಲಯದ ಪರಿಕರಗಳನ್ನು ಅವರ ಕೈಯಲ್ಲಿ ನೀಡಿ ಬಳಕೆಗೆ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರುತ್ತದೆ. ಆ ಪ್ರಯತ್ನದಲ್ಲಿ ಉಪನ್ಯಾಸಕರು ಮುಂದಾದಾಗ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಸಿ. ಪೀರಜಾದೆ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಶೇ.7ರಷ್ಟು ಹೆಚ್ಚಳವಾಗಿದ್ದು, ಪಿಯುಸಿ ಉಪನ್ಯಾಸಕರ ಶ್ರಮದಿಂದ ಇನ್ನೂ ಹೆಚ್ಚಿನ ರೀತಿಯಲ್ಲಿ ಉಪನ್ಯಾಸಕರು ಶ್ರಮವಹಿಸಿ ಕೆಲಸ ಮಾಡಿದರೆ ಇನ್ನೂ ಹೆಚ್ಚಿನ ಫಲಿತಾಂಶ ಬರಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಸಿಇಟಿ ಪರಿಶೀಲನಾ ಘಟಕ ಸ್ಥಾಪನೆ ಮಾಡಲಾಗಿದ್ದು, ಈ ಘಟಕದಲ್ಲಿ 2800 ವಿದ್ಯಾರ್ಥಿಗಳು ಸಿಇಟಿ ಘಟಕವನ್ನು ಬಳಕೆ ಮಾಡಿಕೊಂಡಿದ್ದಾರೆ. ಈ ಸಿಇಟಿ ಘಟಕ ಪ್ರಾರಂಭವಾಗಿದ್ದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಸಿಇಟಿ ಘಟಕದಿಂದಲ್ಲೆ ಜಿಲ್ಲೆಯ 34 ವಿದ್ಯಾರ್ಥಿಗಳು ಮೆಡಿಕಲ್ ಕಾಲೇಜ್‌ಗೆ ಆಯ್ಕೆಯಾಗಿದ್ದಾರೆ ಎಂದರು.
ಜಿಲ್ಲೆಯಲ್ಲಿ ಹೆಚ್ಚಿನ ಫಲಿತಾಂಶ ಬರಲು ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಡಮಕ್ಕಳಿಗೆ ಅನುನೂಲವಾಗಲೆಂದು ತಾಲೂಕುವಾರು ಕೇಂದ್ರಗಳಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ತರಬೇತಿಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದರು.
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಚ್. ಕಬ್ಬಿಣಕಂತಿಮಠ, ಪ್ರಾಚಾರ್ಯ ನೌಕರರ ಸಂಘದ ಕಾರ್ಯಾಧ್ಯಕ್ಷ ಎಚ್.ಬಿ. ಲಿಂಗಯ್ಯ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶಂಕರಗೌಡ ನಿಸ್ಸೀಗೌಡ್ರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭು ಹಿಟ್ನಳ್ಳಿ, ಕಾಲೇಜಿನ ಪ್ರಾಚಾರ್ಯ ಜಿ.ಪಿ. ಪೂಜಾರ, ನಿವೃತ್ತ ಪ್ರಾಚಾರ್ಯ ಎಚ್.ಎಸ್. ಚಿನ್ನಿಕಟ್ಟಿ, ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪ್ರಕಾಶ ಬಾರಕೇರ ಸೇರಿದಂತೆ ಇನ್ನಿತರರು ಇದ್ದರು.