Advertisement

ಪಣಜಿ: ಸಂಚಾರ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಕ್ರಮಕೈಗೊಳ್ಳಲು ಸ್ವಯಂಚಾಲಿತ ಸಾಧನ ಬಳಕೆ

01:12 PM Feb 26, 2023 | Team Udayavani |

ಪಣಜಿ: ಗೋವಾದ ಜನಸಂಖ್ಯೆಯನ್ನು ನೋಡಿದರೆ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ. ಈ ಅಪಘಾತಗಳ ನಿಯಂತ್ರಣಕ್ಕೆ ಸಮಗ್ರ ಅಭಿಯಾನವನ್ನು ಕೈಗೊಳ್ಳಲಾಗುವುದು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ವಿರುದ್ಧ ಕ್ರಮಕೈಗೊಳ್ಳಲು ಭವಿಷ್ಯದಲ್ಲಿ ಸ್ವಯಂಚಾಲಿತ ಸಾಧನಗಳನ್ನು ಬಳಸುವ ಆಯ್ಕೆಯನ್ನು ಅನ್ವೇಷಿಸಲಾಗುವುದು ಎಂದು ಗೋವಾ ರಾಜ್ಯ ಮಹಾನಿರ್ದೇಶಕ ಜಸ್ಪಾಲ್ ಸಿಂಗ್ ಹೇಳಿದ್ದಾರೆ.

Advertisement

ಜನವರಿ ತಿಂಗಳಲ್ಲಿ ಗೋವಾದಲ್ಲಿ ಸಂಭವಿಸಿದ ಅಪಘಾತಗಳಲ್ಲಿ 30 ಜನರು ಸಾವನ್ನಪ್ಪಿದ್ದಾರೆ. ಫೆಬ್ರವರಿಯಲ್ಲೂ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಪೋಲಿಸ್ ಮಹಾನಿರ್ದೇಶಕರು ದಕ್ಷಿಣ ಗೋವಾ ಸಂಚಾರಿ ಪೊಲೀಸ್ ಹಾಗೂ ವಿಭಾಗೀಯ ಉಪಾಧೀಕ್ಷಕರೊಂದಿಗೆ ಸಭೆ ನಡೆಸಿದರು.

ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ನಂಬರ್ ಪ್ಲೇಟ್‍ಗಳನ್ನು ಸೆರೆಹಿಡಿಯುವ ಕ್ಯಾಮೆರಾಗಳನ್ನು ಅಳವಡಿಸುವ ಆಯ್ಕೆಯನ್ನು ಇಲಾಖೆ ಸರ್ಕಾರಕ್ಕೆ ಸೂಚಿಸಿದೆ ಎಂದು ಸಿಂಗ್ ಹೇಳಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಹಾಗೂ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಇನ್ನು ಮುಂದೆ ಗೋವಾದಲ್ಲಿ ಜಿ-20 ಸಭೆಗಳು ನಡೆಯಲಿವೆ. ಭದ್ರತೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪತ್ರಕರ್ತರು ಕೇಳಿದಾಗ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಭೆಗಳು ನಡೆಯುತ್ತಿವೆ ಎಂದು ಸಿಂಗ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next