Advertisement

ಸರ್ಕಾರ ರಕ್ಷಣೆಗೆ ಇಡಿ ಅಸ್ತ್ರ ಬಳಕೆ

11:40 PM Aug 30, 2019 | Lakshmi GovindaRaj |

ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿರವಾಗುತ್ತಿದೆ. ಹೀಗಾಗಿ, ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕು. ಸರ್ಕಾರವನ್ನು ಭದ್ರಪಡಿಸಿಕೊಳ್ಳಬೇಕೆಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಇದಕ್ಕೆ ಜಾರಿ ನಿರ್ದೇಶನಾಲಯವನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ದೂರಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದಾಗಿನಿಂದ ಪ್ರತಿಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ ಹಾಗೂ ಇತರ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರತಿಪಕ್ಷಗಳನ್ನು ದುರ್ಬಲ ಮಾಡುವ ಕೆಲಸ ಮಾಡುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next